ನವದೆಹಲಿ: ಜಿಎಸ್‌ಟಿ ಮಂಡಳಿಯ ವಿಡಿಯೊ ಕಾನ್ಫರೆನ್ಸ್ ಮೂಲಕ ಶನಿವಾರ ಸಭೆ ನಡೆಸಲಿದ್ದು, ಪಾನ್ ಮಸಾಲಾ ಮತ್ತು ಗುಟ್ಕಾ ವಹಿವಾಟಿನಲ್ಲಿ ತೆರಿಗೆ ವಂಚಿಸುವುದನ್ನು ತಡೆಯಲು ವ್ಯವಸ್ಥೆಯೊಂದನ್ನು ರೂಪಿಸುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಕ್ಯಾಸಿನೊ, ಆನ್‌ಲೈನ್ ಆಟಗಳು ಹಾಗೂ ಕುದುರೆ ರೇಸ್‌ಗೆ ಎಷ್ಟು ಪ್ರಮಾಣದ ಜಿಎಸ್‌ಟಿ ವಿಧಿಸಬೇಕು ಹಾಗೂ ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿ ರಚನೆ ಮಾಡುವ ಕುರಿತು ರಾಜ್ಯ ಹಣಕಾಸು ಸಚಿವರ ಸಮಿತಿ ಸಲ್ಲಿಸಿರುವ ವರದಿಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಭಾರತೀಯ ದಂಡ ಸಂಹಿತೆಯಲ್ಲಿ (ಐಪಿಸಿ) ಅಡಕವಾಗಿರುವ ಶಿಕ್ಷಾರ್ಹ ಅಪರಾಧಗಳ ಉಲ್ಲೇಖವನ್ನು ಜಿಎಸ್‌ಟಿ ಕಾಯ್ದೆಯಿಂದ ತೆಗೆಯುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.