ಗುರುವಾರ , ಆಗಸ್ಟ್ 18, 2022
26 °C

ರಾಜ್ಯಗಳಿಗೆ ಪರಿಹಾರ: ಜಿಎಸ್‌ಟಿ ಮಂಡಳಿ ಚರ್ಚೆ?

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯಗಳಿಗೆ ವರಮಾನ ನಷ್ಟವನ್ನು ತುಂಬಿಕೊಡುವುದು ಹೇಗೆ, ಕೆಲವು ಉತ್ಪನ್ನಗಳ ಮೇಲಿನ ತೆರಿಗೆ ಪ್ರಮಾಣದಲ್ಲಿ ಯಾವ ಬದಲಾವಣೆ ಆಗಬೇಕು ಎಂಬ ಬಗ್ಗೆ ಮಂಗಳವಾರದಿಂದ ಶುರುವಾಗುವ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

ಆನ್‌ಲೈನ್‌ ಆಟಗಳು, ಕ್ಯಾಸಿನೊ, ಕುದುರೆ ರೇಸ್‌ ಮೇಲೆ ಶೇಕಡ 28ರಷ್ಟು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಮಂಡಳಿಯು ಒಪ್ಪಿಗೆ ನೀಡುವ ಸಾಧ್ಯತೆ ಇದೆ.

ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ರಾಜ್ಯಗಳಿಗೆ ಆಗುವ ವರಮಾನ ನಷ್ಟವನ್ನು ಕೇಂದ್ರವು ಭರ್ತಿ ಮಾಡಿಕೊಡುವ ವ್ಯವಸ್ಥೆಯು ಜೂನ್ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಈ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಬಿಜೆಪಿಯ ವಿರೋಧ ಪಕ್ಷಗಳ ಆಡಳಿತ ಇರುವ ರಾಜ್ಯ ಸರ್ಕಾರಗಳು ಬಲವಾಗಿ ಆಗ್ರಹಿಸುತ್ತಿವೆ. ಹೀಗಾಗಿ, ಪರಿಹಾರ ವಿಚಾರವಾಗಿ ಬಿರುಸಿನ ಚರ್ಚೆ ನಡೆಯುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.