ನವದೆಹಲಿ: ಜಿಎಸ್‌ಟಿ ಮಂಡಳಿಯು ಮಂಗಳವಾರ ಸಭೆ ಸೇರಲಿದ್ದು, ಆನ್‌ಲೈನ್ ಆಟಗಳಿಗೆ ತೆರಿಗೆ ಪ್ರಮಾಣ, ಐಟಿಸಿ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಮಲ್ಟಿಪ್ಲೆಕ್ಸ್‌ಗಳಲ್ಲಿ ಮಾರಾಟ ಆಗುವ ತಿನಿಸುಗಳು ಮತ್ತು ತಂಪುಪಾನೀಯಗಳ ಮೇಲಿನ ತೆರಿಗೆ ದರಗಳ ಕುರಿತಾಗಿಯೂ ಮಂಡಳಿಯು ಸ್ಪಷ್ಟನೆ ನೀಡುವ ಸಾಧ್ಯತೆ ಇದೆ. ಅಲ್ಲದೆ, ಕ್ಯಾನ್ಸರ್ ಔಷಧ ಆಮದು ಮಾಡಿಕೊಳ್ಳುವುದನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡುವ ಕುರಿತು ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ.
ಮೇಲ್ಮನವಿ ಪ್ರಾಧಿಕಾರ ರಚನೆ ಮಾಡುವ ಕುರಿತಾಗಿಯೂ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.