ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ : ತೆರಿಗೆದಾರರ ಸಮಸ್ಯೆ ಪರಿಹಾರ ಸಮಿತಿ

Last Updated 25 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಜಿಎಸ್‌ಟಿ ತೆರಿಗೆದಾರರ ಕುಂದುಕೊರತೆಗಳಿಗೆ ಪರಿಹಾರ ಒದಗಿಸಲು ನೆರವಾಗುವ ಸಮಿತಿಗಳು ಶೀಘ್ರದಲ್ಲಿಯೇ ಅಸ್ತಿತ್ವಕ್ಕೆ ಬರಲಿವೆ.

ಇಂತಹ ಸಮಿತಿಗಳ ರಚನೆ ಸಂಬಂಧ ಜಿಎಸ್‌ಟಿ ಮಂಡಳಿಯು ಈಗಾಗಲೇ ನಿರ್ಧಾರ ಕೈಗೊಂಡಿದೆ. ಪ್ರಾದೇಶಿಕ ಮತ್ತು ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಸಮಿತಿಗಳು ನಿರ್ದಿಷ್ಟ ಮತ್ತು ಸಾಮಾನ್ಯ ಸ್ವರೂಪದ ಸಮಸ್ಯೆಗಳನ್ನು ಬಗೆಹರಿಸಲು ನೆರವಾಗಲಿವೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಸಮಿತಿಗಳಲ್ಲಿ ಕೇಂದ್ರ, ರಾಜ್ಯ ತೆರಿಗೆ ಅಧಿಕಾರಿಗಳು, ವಾಣಿಜ್ಯೋದ್ಯಮ ವಲಯದ ಪ್ರತಿನಿಧಿಗಳು ಮತ್ತು ಇತರ ಭಾಗಿದಾರರು ಸದಸ್ಯರಾಗಿರುತ್ತಾರೆ. ಎರಡು ವರ್ಷಗಳವರೆಗೆ ಈ ಸಮಿತಿಗಳು ಅಸ್ತಿತ್ವದಲ್ಲಿ ಇರಲಿವೆ.

ತೆರಿಗೆದಾರರು ಎದುರಿಸುತ್ತಿರುವ ಎಲ್ಲ ಬಗೆಯ ಸಮಸ್ಯೆಗಳನ್ನು ಪರಿಶೀಲಿಸಿ ಅವುಗಳನ್ನು ಬಗೆಹರಿಸಲು ಈ ಸಮಿತಿಗಳು ನೆರವಾಗಲಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಸಮಿತಿಗಳು ಸಭೆ ಸೇರಲಿವೆ. ಸಮಿತಿ ಅಧ್ಯಕ್ಷರು ಇಷ್ಟಪಟ್ಟರೆ ತ್ರೈಮಾಸಿಕ ಅವಧಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿಯೂ ಸಭೆ ನಡೆಸಬಹುದು.ಕಾಲಮಿತಿ ಒಳಗೆ ಸಮಸ್ಯೆಗಳನ್ನು ಬಗೆಹರಿಸಲು ನೆರವಾಗುವುದಕ್ಕೆ ಜಿಎಸ್‌ಟಿಎನ್‌ ಪ್ರತ್ಯೇಕ ಅಂತರ್ಜಾಲ ತಾಣವನ್ನು ಅಭಿವೃದ್ಧಿಪಡಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT