ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

₹18 ಸಾವಿರ ಕೋಟಿ ಮೊತ್ತದ ‘ಐಟಿಸಿ’ ವಂಚನೆ ಪತ್ತೆ

Published 3 ಫೆಬ್ರುವರಿ 2024, 16:23 IST
Last Updated 3 ಫೆಬ್ರುವರಿ 2024, 16:23 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2023–24ನೇ ಹಣಕಾಸು ವರ್ಷದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ನಕಲಿ ಇನ್‌ವಾಯ್ಸ್‌ ಸೃಷ್ಟಿಸಿ ₹18 ಸಾವಿರ ಕೋಟಿ ಮೊತ್ತದ ಜಿಎಸ್‌ಟಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್‌ (ಐಟಿಸಿ) ವಂಚಿಸಿದ್ದ 98 ಮಂದಿಯನ್ನು ಬಂಧಿಸಲಾಗಿದೆ ಎಂದು ಹಣಕಾಸು ಸಚಿವಾಲಯವು ಶನಿವಾರ ತಿಳಿಸಿದೆ.

ಈ ಆರೋಪಿಗಳು ನಕಲಿ ಬಿಲ್ ತೋರಿಸಿ ಐಟಿಸಿ ಸೌಲಭ್ಯ ಪಡೆದುಕೊಳ್ಳುತ್ತಿದ್ದರು. ದೇಶದ ವಿವಿಧೆಡೆ ಈ ವಂಚಕರ ಜಾಲ ಸಕ್ರಿಯವಾಗಿತ್ತು. ಜಿಎಸ್‌ಟಿ ಗುಪ್ತಚರ ಮಹಾನಿರ್ದೇಶನಾಲಯದ (ಡಿಜಿಜಿಐ) ಅಧಿಕಾರಿಗಳು ಸತತವಾಗಿ ಕಾರ್ಯಾಚರಣೆ ನಡೆಸಿ ಈ ಜಾಲವನ್ನು ಭೇದಿಸಿದ್ದಾರೆ ಎಂದು ತಿಳಿಸಿದೆ.‌

2023ರ ಡಿಸೆಂಬರ್‌ವರೆಗೆ ಒಟ್ಟು 1,700 ನಕಲಿ ಐಟಿಸಿ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಈ ತೆರಿಗೆ ವಂಚಕರ ಜಾಲವನ್ನು ಬಯಲಿಗೆಳೆಯಲಾಗಿದೆ ಎಂದು ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT