ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳೆದ ವರ್ಷದಲ್ಲಿ ₹1.98 ಲಕ್ಷ ಕೋಟಿ ಜಿಎಸ್‌ಟಿ ವಂಚನೆ

Published 11 ಜನವರಿ 2024, 20:32 IST
Last Updated 11 ಜನವರಿ 2024, 20:32 IST
ಅಕ್ಷರ ಗಾತ್ರ

ನವದೆಹಲಿ: 2023ನೇ ಸಾಲಿನಡಿ ದೇಶದಲ್ಲಿ ಜಿಎಸ್‌ಟಿ ಗುಪ್ತಚರ ಮಹಾನಿರ್ದೇಶನಾಲಯವು (ಡಿಜಿಜಿಐ) ₹1.98 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆಹಚ್ಚಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಗುರುವಾರ ತಿಳಿಸಿದೆ.

ಸರ್ಕಾರದ ಬೊಕ್ಕಸಕ್ಕೆ ವಂಚಿಸಿದ ಆರೋಪದ ಮೇಲೆ 140 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

ಆನ್‌ಲೈನ್‌ ಗೇಮಿಂಗ್‌, ಕ್ಯಾಸಿನೊ ಹಾಗೂ ವಿಮಾ ಕ್ಷೇತ್ರದಲ್ಲಿ ಅತಿಹೆಚ್ಚು ವಂಚನೆ ನಡೆದಿದೆ. ಒಟ್ಟು 6,323 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2022ನೇ ಸಾಲಿನಡಿ ₹90,499 ಕೋಟಿ ಮೊತ್ತದ ಜಿಎಸ್‌ಟಿ ವಂಚಿಸಿದ್ದ 4,273 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿತ್ತು ಎಂದು ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT