ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ | ₹1.68 ಲಕ್ಷ ಕೋಟಿ ಸಂಗ್ರಹ: ಕೇಂದ್ರ ಹಣಕಾಸು ಸಚಿವಾಲಯ

Published 1 ಮಾರ್ಚ್ 2024, 15:36 IST
Last Updated 1 ಮಾರ್ಚ್ 2024, 15:36 IST
ಅಕ್ಷರ ಗಾತ್ರ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ 2023–24ನೇ ಹಣಕಾಸು ವರ್ಷದ ಫೆಬ್ರುವರಿಯಲ್ಲಿ ₹1.68 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಶುಕ್ರವಾರ ತಿಳಿಸಿದೆ.

ಕಳೆದ ಆರ್ಥಿಕ ವರ್ಷದ ಫೆಬ್ರುವರಿಯಲ್ಲಿ ಸಂಗ್ರಹವಾಗಿದ್ದ ವರಮಾನಕ್ಕೆ ಹೋಲಿಸಿದರೆ ಶೇ 12.5ರಷ್ಟು ಏರಿಕೆಯಾಗಿದೆ. ಆದರೆ, ಪ್ರಸಕ್ತ ವರ್ಷದ ಜನವರಿಯಲ್ಲಿ ಸಂಗ್ರಹವಾಗಿದ್ದ ₹1.72 ಲಕ್ಷ ಕೋಟಿಗೆ ಹೋಲಿಸಿದರೆ ಇಳಿಕೆ ಆಗಿದೆ. 

2023–24ನೇ ಆರ್ಥಿಕ ವರ್ಷದಲ್ಲಿ ಫೆಬ್ರುವರಿವರೆಗೆ ಒಟ್ಟು ₹18.40 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ. 2022–23ನೇ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 11.7ರಷ್ಟು ಏರಿಕೆಯಾಗಿದೆ.

ಕಳೆದ ಹನ್ನೊಂದು ತಿಂಗಳಿನಲ್ಲಿ ಸರಾಸರಿ ಸಂಗ್ರಹವು ₹1.67 ಲಕ್ಷ ಕೋಟಿ ಆಗಿದೆ. ಕಳೆದ ಹಣಕಾಸು ವರ್ಷದಲ್ಲಿ ಸರಾಸರಿ ಸಂಗ್ರಹ ₹1.5 ಲಕ್ಷ ಕೋಟಿ ಇತ್ತು ಎಂದು ಸಚಿವಾಲಯವು ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT