ಭಾನುವಾರ, ಜನವರಿ 17, 2021
26 °C

₹ 832 ಕೋಟಿ ಜಿಎಸ್‌ಟಿ ವಂಚನೆ: ಓರ್ವ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಕ್ರಮವಾಗಿ ಪಾನ್‌ ಮಸಾಲಾ ತಯಾರಿಸಿ ಪೂರೈಸುವ ಮೂಲಕ ₹ 832 ಕೋಟಿ ಮೊತ್ತದ ತೆರಿಗೆ ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಜಿಎಸ್‌ಟಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಹಣಕಾಸು ಸಚಿವಾಲಯ ಭಾನುವಾರ ತಿಳಿಸಿದೆ.

ಕೇಂದ್ರ ಜಿಎಸ್‌ಟಿಯ ದೆಹಲಿ ಪಶ್ಚಿಮ ಆಯುಕ್ತರ ಕಚೇರಿಯ ಅಧಿಕಾರಿಗಳು ಈ ತೆರಿಗೆ ವಂಚನೆ ಪ್ರಕರಣವನ್ನು ಬಯಲು ಮಾಡಿದ್ದಾರೆ. ನೋಂದಣಿ ಮಾಡದೆ, ಯಾವುದೇ ರೀತಿಯ ತೆರಿಗೆ ಪಾವತಿಸದೇ ಪಾನ್‌ ಮಸಾಲಾ ತಯಾರಿಕೆ ಮತ್ತು ಪೂರೈಕೆ ಮಾಡಲಾಗುತ್ತಿತ್ತು ಎಂದು ಸಚಿವಾಲಯ ಹೇಳಿದೆ.

ಅಕ್ರಮವಾಗಿ ನಡೆಯುತ್ತಿದ್ದ ಕಾರ್ಖಾನೆಯ ಮೇಲೆ ದಾಳಿ ನಡೆಸಿದ ವೇಳೆ, ಪಾನ್‌ ಮಸಾಲಾ ತಯಾರಿಕೆಗೆ ಬಳಸುತ್ತಿದ್ದ ₹ 4.14 ಕೋಟಿ ಮೌಲ್ಯದ ಕಚ್ಚಾ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. 65 ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಂಧಿತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು