ಶನಿವಾರ, ಸೆಪ್ಟೆಂಬರ್ 24, 2022
21 °C

ರಾಜ್ಯಗಳ ಒತ್ತಾಯದ ಮೇರೆಗೆ ಆಹಾರ ಪದಾರ್ಥಕ್ಕೆ ಜಿಎಸ್‌ಟಿ: ತರುಣ್‌ ಬಜಾಜ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ಯಾಕ್‌ ಆಗಿರುವ ಆಹಾರ ಪದಾರ್ಥಗಳಿಗೆ ಜಿಎಸ್‌ಟಿ ವಿಧಿಸುವಂತೆ ಕೆಲವು ರಾಜ್ಯಗಳು ಒತ್ತಾಯಪಡಿಸಿದ್ದವು ಎಂದು ರೆವಿನ್ಯು ಕಾರ್ಯದರ್ಶಿ ತರುಣ್‌ ಬಜಾಜ್‌ ಭಾನುವಾರ ತಿಳಿಸಿದ್ದಾರೆ.

‘ಜಿಎಸ್‌ಟಿ ಜಾರಿಗೆ ಬರುವುದಕ್ಕೂ ಮೊದಲು ಪ್ಯಾಕ್‌ ಆಗಿರುವ ಆಹಾರ ಪದಾರ್ಥಗಳ ಮೇಲೆ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ವಿಧಿಸುತ್ತಿದ್ದರಿಂದ ಸಾಕಷ್ಟು ವರಮಾನ ಬರುತ್ತಿತ್ತು. ಆದರೆ, ಜಿಎಸ್‌ಟಿ ಬಂದ ಬಳಿಕ ವರಮಾನ ನಷ್ಟ ಆಗುತ್ತಿದೆ. ಹೀಗಾಗಿ ಈ ಕುರಿತು ಏನಾದರೂ ಮಾಡಬೇಕಿದೆ ಎಂದು ಕೆಲವು ರಾಜ್ಯಗಳು ಹೇಳಿದ್ದವು’ ಎಂದು ಅವರು ತಿಳಿಸಿದ್ದಾರೆ. ಆದರೆ, ಆ ರಾಜ್ಯಗಳ ಹೆಸರನ್ನು ಅವರು ಬಹಿರಂಗಪಡಿಸಲಿಲ್ಲ.

ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಂಸತ್‌ ಕಲಾಪಕ್ಕೆ ಅಡ್ಡಿಪಡಿಸಿದ್ದವು. ಈ ಹಿನ್ನೆಲೆಯಲ್ಲಿ ತರುಣ್‌ ಬಜಾಜ್‌ ಪ್ರತಿಕ್ರಿಯೆ ನೀಡಿದ್ದಾರೆ. ‘ತೆರಿಗೆ ವಿಧಿಸಲು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಸಹ ಒಪ್ಪಿದ್ದವು’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು