ನವದೆಹಲಿ: ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯಗಳು ಕೈಗೆಟುವಂತೆ ಮಾಡುವ ಉದ್ದೇಶದಿಂದ ಸರಕು ಮತ್ತು ಸೇವಾ(ಜಿಎಸ್ಟಿ) ದರಗಳ ಪರಿಷ್ಕರಣೆ ವೇಳೆ ಕೇಂದ್ರ ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ವಿನಾಯಿತಿ ನೀಡಿದೆ.

ವಿಮಾ ಸೌಲಭ್ಯವು ಎಲ್ಲರಿಗೂ ತಲುಪಲಿ ಎಂಬ ಉದ್ದೇಶದಿಂದ ವೈಯಕ್ತಿಕ ಜೀವ ವಿಮೆ ಮತ್ತು ಆರೋಗ್ಯ ವಿಮೆ ಪಾಲಿಸಿಗಳ ಪ್ರೀಮಿಯಮ್ಗೆ ಜಿಎಸ್ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಫ್ಯಾಮಿಲಿ ಫ್ಲೋಟರ್ ಪಾಲಿಸಿಗಳು, ಹಿರಿಯ ನಾಗರಿಕರ ಆರೋಗ್ಯ ವಿಮೆ ಪಾಲಿಸಿಗಳ ಪ್ರೀಮಿಯಂಗಳಿಗೂ ಜಿಎಸ್ಟಿಯಿಂದ ವಿನಾಯಿತಿ ನೀಡಲಾಗಿದೆ.

ಜಿಎಸ್ಟಿ ವ್ಯವಸ್ಥೆ ಜಾರಿಗೆ ಬಂದಾಗಿನಿಂದ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಶೇ 18ರಷ್ಟು ಜಿಎಸ್ಟಿ ವಿಧಿಸಲಾಗುತ್ತಿತ್ತು.

ಇನ್ನು, ಥರ್ಮೋಮೀಟರ್ ಮೇಲಿನ ಶೇ 18ರಷ್ಟು ತೆರಿಗೆಯನ್ನು ಶೇ 5ಕ್ಕೆ ಇಳಿಸಲಾಗಿದೆ. ಇದರೊಂದಿಗೆ ಹಲವಾರು ನಿರ್ಣಾಯಕ ವೈದ್ಯಕೀಯ ವಸ್ತುಗಳ ಮೇಲಿನ ಜಿಎಸ್ಟಿ ದರಗಳನ್ನು ಶೇ 12 ರಿಂದ ಶೇ 5 ಕ್ಕೆ ಇಳಿಸಲಾಗಿದೆ.

ಫೀಡಿಂಗ್ ಬಾಟಲಿಗಳು, ಬೇಬಿ ನ್ಯಾಪ್ಕಿನ್ ಮತ್ತು ಡೈಪರ್ಗಳು ದರಗಳನ್ನು ಶೇ 5ಕ್ಕೆ ಕಡಿತಗೊಳಿಸಲಾಗಿದೆ.

ತೆರಿಗೆಯಿಂದ ಸಂಪೂರ್ಣ ವಿನಾಯಿತಿ

ವೈಯಕ್ತಿಕ ಜೀವ ವಿಮೆ ಮತ್ತು ಆರೋಗ್ಯ ವಿಮೆ ಪಾಲಿಸಿ

ಫ್ಯಾಮಿಲಿ ಫ್ಲೋಟರ್ ಪಾಲಿಸಿ

ಹಿರಿಯ ನಾಗರಿಕರ ಆರೋಗ್ಯ ವಿಮೆ

ಶೇ 18ರಿಂದ ಶೇ 5ಕ್ಕೆ

ಥರ್ಮೋಮೀಟರ್

ಶೇ 12ರಿಂದ ಶೇ 5ಕ್ಕೆ

ಮೆಡಿಕಲ್ ಗ್ರೇಡ್ ಆಕ್ಸಿಜನ್

ಡಯಾಗ್ನೋಸ್ಟಿಕ್ ಕಿಟ್

ಗ್ಲುಕೋಮೀಟರ್

ಟೆಸ್ಟ್ ಸ್ಟ್ರೀಪ್ಸ್

ಕನ್ನಡಕಗಳು (ಕರೆಕ್ಟಿವ್ ಸ್ಪೆಕ್ಟಲ್ಸ್)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.