ಗುರುವಾರ , ಸೆಪ್ಟೆಂಬರ್ 23, 2021
28 °C

ಜುಲೈನಲ್ಲಿ ₹1.16 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಜುಲೈ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ ₹1.16 ಲಕ್ಷ ಕೋಟಿಗೂ ಹೆಚ್ಚು ಮಾಸಿಕ ವರಮಾನ ಸಂಗ್ರಹವಾಗಿದೆ’ ಎಂದು ಹಣಕಾಸು ಸಚಿವಾಲಯ ಭಾನುವಾರ ತಿಳಿಸಿದೆ.

‘ಕಳೆದ ವರ್ಷ ಇದೇ ತಿಂಗಳು ಸಂಗ್ರಹವಾಗಿದ್ದ ಜಿಎಸ್‌ಟಿ ವರಮಾನಕ್ಕೆ ಹೋಲಿಸದರೆ ಈ ಬಾರಿ ಶೇಕಡ 33 ರಷ್ಟು ಹೆಚ್ಚು ವರಮಾನ ಸಂಗ್ರಹವಾಗಿದೆ. ಈ ಬೆಳವಣಿಗೆಯು ದೇಶದ ಆರ್ಥಿಕತೆಯು ವೇಗವಾಗಿ ಚೇತರಿಸಿಕೊಳ್ಳುತ್ತಿದೆ ಎಂಬುದನ್ನು ತೋರಿಸುತ್ತದೆ’ ಎಂದು ಸಚಿವಾಲಯ ಹೇಳಿದೆ.

ಜುಲೈ,2020ರಲ್ಲಿ ₹87,422 ಕೋಟಿ ಜಿಎಸ್‌ಟಿ ವರಮಾನ ಸಂಗ್ರಹವಾಗಿತ್ತು. ಈ ವರ್ಷ ಜೂನ್‌ ತಿಂಗಳಲ್ಲಿ ₹92,849 ಕೋಟಿ ಜಿಎಸ್‌ಟಿ ಮಾಸಿಕ ವರಮಾನ ಸಂಗ್ರಹವಾದರೆ, ಜುಲೈ ತಿಂಗಳಲ್ಲಿ ₹1,16,393 ಜಿಎಸ್‌ಟಿ ವರಮಾನ ಸಂಗ್ರಹವಾಗಿದೆ. ಇದರಲ್ಲಿ ಕೇಂದ್ರ ಜಿಎಸ್‌ಟಿ ಮೂಲಕ ₹ 22,197 ಕೋಟಿ, ರಾಜ್ಯ ಜಿಎಸ್‌ಟಿ ಮೂಲಕ ₹28,541 ಕೋಟಿ, ಸಮಗ್ರ ಜಿಎಸ್‌ಟಿ ಮೂಲಕ ₹57,864 ಕೋಟಿ ಮತ್ತು ಸೆಸ್‌ ಮೂಲಕ ₹7,790 ಕೋಟಿ ಸಂಗ್ರಹ ಆಗಿದೆ.

‘ಕಳೆದ ತಿಂಗಳು ಮೊದಲ ಬಾರಿ ಎಂಟು ತಿಂಗಳ ಬಳಿಕ ಜಿಎಸ್‌ಟಿ ಮಾಸಿಕ ವರಮಾನವು ₹ 1 ಲಕ್ಷ ಕೋಟಿಗಿಂತ ಕೆಳಕ್ಕೆ ಬಂದಿತ್ತು. ಈ ವರ್ಷ ಮೇ ತಿಂಗಳಲ್ಲಿ ಬಹುತೇಕ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ಭಾಗಶಃ ಅಥವಾ ಸಂಪೂರ್ಣ ಲಾಕ್‌ಡೌನ್‌ ಹೇರಲಾಗಿತ್ತು. ಜುಲೈ ವೇಳೆಗೆ ನಿರ್ಬಂಧಗಳನ್ನು ಸಡಿಲಗೊಳಿಸಲಾಯಿತು. ಇದರಿಂದಾಗಿ ಜಿಎಸ್‌ಟಿ ಸಂಗ್ರಹವೂ ಹೆಚ್ಚಾಯಿತು’ ಎಂದು ಎಂದು ಸಚಿವಾಲಯ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು