ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

GST| ₹1.73 ಲಕ್ಷ ಕೋಟಿ ಸಂಗ್ರಹ: ಮಹಾರಾಷ್ಟ್ರದಲ್ಲಿ ಇಳಿಕೆ, ಕರ್ನಾಟಕದಲ್ಲಿ ಏರಿಕೆ

Published : 1 ಅಕ್ಟೋಬರ್ 2024, 15:28 IST
Last Updated : 1 ಅಕ್ಟೋಬರ್ 2024, 15:28 IST
ಫಾಲೋ ಮಾಡಿ
Comments

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ ಸೆಪ್ಟೆಂಬರ್ ತಿಂಗಳಲ್ಲಿ ವರಮಾನ ಸಂಗ್ರಹದಲ್ಲಿ ಶೇ 6.5ರಷ್ಟು ಏರಿಕೆಯಾಗಿದೆ. ಒಟ್ಟು ₹1.73 ಲಕ್ಷ ಕೋಟಿ ಸಂಗ್ರಹವಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಮರುಪಾವತಿ ಬಳಿಕ ₹1.53 ಲಕ್ಷ ಕೋಟಿ ಆಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 3.39ರಷ್ಟು ಏರಿಕೆಯಾಗಿದೆ.

ಆಗಸ್ಟ್‌ನಲ್ಲಿ ₹1.75 ಲಕ್ಷ ಕೋಟಿ ವರಮಾನ ಸಂಗ್ರಹವಾಗಿತ್ತು. 2023ರ ಸೆಪ್ಟೆಂಬರ್‌ನಲ್ಲಿ ₹1.63 ಲಕ್ಷ ಕೋಟಿ ಸಂಗ್ರಹವಾಗಿತ್ತು. ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಲ್ಲಿ ₹2.10 ಲಕ್ಷ ಕೋಟಿ ಸಂಗ್ರಹವಾಗಿದ್ದು, ಇದುವರೆಗಿನ ದಾಖಲೆಯಾಗಿದೆ.

ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಒಟ್ಟು ₹10.87 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 9.5ರಷ್ಟು ಹೆಚ್ಚಳವಾಗಿದೆ ಎಂದು ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಇಳಿಕೆ:

ಕೆಲವು ಪ್ರಮುಖ ರಾಜ್ಯಗಳಲ್ಲಿ ಜಿಎಸ್‌ಟಿ ವರಮಾನ ಸಂಗ್ರಹದಲ್ಲಿ ಕಡಿಮೆಯಾಗಿದೆ. ದೇಶದ ಜಿಎಸ್‌ಟಿಗೆ ಅತಿಹೆಚ್ಚು ಕೊಡುಗೆ ನೀಡುವ ಮಹಾರಾಷ್ಟ್ರದಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ವರಮಾನ ಸಂಗ್ರಹದಲ್ಲಿ ಶೇ 5ರಷ್ಟು ಇಳಿಕೆಯಾಗಿದೆ.

ಕರ್ನಾಟಕದಲ್ಲಿ ಶೇ 8ರಷ್ಟು ಏರಿಕೆಯಾಗಿದ್ದು, ₹12,642 ಕೋಟಿ ಸಂಗ್ರಹವಾಗಿದೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ₹11,693 ಕೋಟಿ ಸಂಗ್ರಹವಾಗಿತ್ತು.

ಗುಜರಾತ್‌ನಲ್ಲಿ ವರಮಾನ ಸಂಗ್ರಹ ಸ್ಥಿರವಾಗಿದೆ. ಒಟ್ಟು ₹10,153 ಕೋಟಿ ಸಂಗ್ರಹವಾಗಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಕ್ರಮವಾಗಿ ಶೇ 5ರಷ್ಟು ಹಾಗೂ ಶೇ 7ರಷ್ಟು ಏರಿಕೆಯಾಗಿದೆ. ಹರಿಯಾಣದಲ್ಲಿ ಶೇ 24ರಷ್ಟು ಹಾಗೂ ದೆಹಲಿಯಲ್ಲಿ ಶೇ 20ರಷ್ಟು ಹೆಚ್ಚಳವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT