ಭಾನುವಾರ, ಸೆಪ್ಟೆಂಬರ್ 26, 2021
27 °C

ಎಚ್‌ಸಿಎಲ್‌ ಲಾಭ ₹ 3,214 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

ಶಿವ ನಾಡಾರ್–ಸಾಂದರ್ಭಿಕ ಚಿತ್ರ

ನವದೆಹಲಿ: ಐ.ಟಿ. ಸೇವಾ ಕಂಪನಿ ಎಚ್‌ಸಿಎಲ್‌ ಟೆಕ್ನಾಲಜೀಸ್‌ ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹ 3,214 ಕೋಟಿ ಲಾಭ ಗಳಿಸಿದೆ.

ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕಂಪನಿ ಆಡಳಿತ ಮಂಡಳಿಯ ಹುದ್ದೆಗಳನ್ನು ತೊರೆಯಲು ಶಿವ ನಾಡಾರ್ ನಿರ್ಧರಿಸಿದ್ದಾರೆ. ಅವರು ಕಂಪನಿಯ ಗೌರವಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಸಿ. ವಿಜಯಕುಮಾರ್ ಅವರು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಐದು ವರ್ಷಗಳ ಅವಧಿಗೆ ಮಂಗಳವಾರದಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಆಡಳಿತ ಮಂಡಳಿಯು 2021–22ನೇ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಷೇರುದಾರರಿಗೆ ಪ್ರತಿ ಷೇರಿಗೆ ₹ 6ರಂತೆ ಮಧ್ಯಂತರ ಲಾಭಾಂಶ ಘೋಷಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು