2024–25ರ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ಕಂಪನಿ ₹4,257 ಕೋಟಿ ನಿವ್ವಳ ಲಾಭ ಗಳಿಸಿತ್ತು. 2023–24ರ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಶೇ 20ರಷ್ಟು ಹೆಚ್ಚಳವಾಗಿದೆ. ವರಮಾನವು ₹28,057 ಕೋಟಿಯಾಗಿದ್ದು, ಶೇ 6ರಷ್ಟು ಏರಿಕೆಯಾಗಿದೆ. ಪ್ರಸಕ್ತ ವರ್ಷದ ಜೂನ್ ಅಂತ್ಯದ ವೇಳೆಗೆ, ಕಂಪನಿಯು 60 ದೇಶಗಳಲ್ಲಿ 2.19 ಲಕ್ಷ ಉದ್ಯೋಗಿಗಳನ್ನು ಹೊಂದಿದೆ.