ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸದಾಗಿ 4 ಲಕ್ಷ ಕ್ರೆಡಿಟ್‌ ಕಾರ್ಡ್ ವಿತರಣೆ: ಎಚ್‌ಡಿಎಫ್‌ಸಿ ಬ್ಯಾಂಕ್‌

Last Updated 29 ಸೆಪ್ಟೆಂಬರ್ 2021, 11:27 IST
ಅಕ್ಷರ ಗಾತ್ರ

ನವದೆಹಲಿ: ಕ್ರೆಡಿಟ್‌ ಕಾರ್ಡ್‌ ವಿತರಣೆಗೆ ಸಂಬಂಧಿಸಿದಂತೆ ತನ್ನ ಮೇಲೆ ಹೇರಿದ್ದ ನಿರ್ಬಂಧವನ್ನು ಆರ್‌ಬಿಐ ಹಿಂಪಡೆದ ಬಳಿಕ ಹೊಸದಾಗಿ ನಾಲ್ಕು ಲಕ್ಷ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಣೆ ಮಾಡಿರುವುದಾಗಿ ಎಚ್‌ಡಿಎಫ್‌ಸಿ ಬ್ಯಾಂಕ್‌ ಬುಧವಾರ ತಿಳಿಸಿದೆ.

ಕ್ರೆಡಿಟ್‌ ಕಾರ್ಡ್‌ ನೀಡುವಿಕೆಯನ್ನು ಇನ್ನಷ್ಟು ತ್ವರಿತಗೊಳಿಸುವ ಹಾಗೂ ಕಳೆದುಕೊಂಡಿರುವ ಮಾರುಕಟ್ಟೆ ಪಾಲನ್ನು ಮರಳಿ ಪಡೆಯುವ ಪ್ರಯತ್ನ ನಡೆಸುವುದಾಗಿ ಬ್ಯಾಂಕ್‌ನ ಪಾವತಿ, ಗ್ರಾಹಕ ಹಣಕಾಸು ಮತ್ತು ಡಿಜಿಟಲ್‌ ಬ್ಯಾಂಕಿಂಗ್‌ ಮುಖ್ಯಸ್ಥ ಪರಾಗ್ ರಾವ್ ತಿಳಿಸಿದ್ದಾರೆ.

ಬ್ಯಾಂಕ್‌ನ ಇಂಟರ್‌ನೆಟ್‌/ಮೊಬೈಲ್‌ ಬ್ಯಾಂಕಿಂಗ್‌ ಹಾಗೂ ಪಾವತಿ ಸೇವೆಗಳಲ್ಲಿ ಪದೇ ಪದೇ ತಾಂತ್ರಿಕ ದೋಷಗಳು ಕಂಡುಬಂದಿದ್ದರಿಂದ ಆರ್‌ಬಿಐ ಕಳೆದ ಡಿಸೆಂಬರ್‌ನಲ್ಲಿ ಹೊಸದಾಗಿ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡುವುದಕ್ಕೆ ತಡೆ ನೀಡಿತ್ತು. ಬಳಿಕ ಆಗಸ್ಟ್‌ ಮಧ್ಯಭಾಗದಲ್ಲಿ ನಿರ್ಬಂಧವನ್ನು ಸಡಿಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT