ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಎಫ್‌ಸಿ ಬ್ಯಾಂಕ್‌ ಮಾರುಕಟ್ಟೆ ಮೌಲ್ಯ ₹ 8.05 ಲಕ್ಷ ಕೋಟಿ

Last Updated 25 ನವೆಂಬರ್ 2020, 12:00 IST
ಅಕ್ಷರ ಗಾತ್ರ

ನವದೆಹಲಿ: ಎಚ್‌ಡಿಎಫ್‌ಸಿ ಬ್ಯಾಂಕ್‌ನ ಮಾರುಕಟ್ಟೆ ಬಂಡವಾಳ ಮೌಲ್ಯವು ಬುಧವಾರದ ವಹಿವಾಟಿನಲ್ಲಿ ₹ 8 ಲಕ್ಷ ಕೋಟಿಯ ಗಡಿಯನ್ನು ದಾಟಿದೆ. ಈ ಸಾಧನೆ ಮಾಡಿದ ದೇಶದ ಮೊದಲ ಬ್ಯಾಂಕ್‌ ಎಂಬ ಹೆಗ್ಗಳಿಕೆಗೆ ಎಚ್‌ಡಿಎಫ್‌ಸಿ ಪಾತ್ರವಾಗಿದೆ.

ಮುಂಬೈ ಷೇರುಪೇಟೆಯಲ್ಲಿ ಕಂಪನಿಯ ಮಾರುಕಟ್ಟೆ ಮೌಲ್ಯವು ₹ 8.05 ಲಕ್ಷ ಕೋಟಿಗಳಷ್ಟಾಗಿದೆ. ಬ್ಯಾಂಕ್‌ನ ಷೇರುಗಳ ಬೆಲೆ ಶೇಕಡ 1.76ರಷ್ಟು ಹೆಚ್ಚಾಗಿ ಒಂದು ವರ್ಷದ ಗರಿಷ್ಠ ಮಟ್ಟವಾದ ₹ 1,464ಕ್ಕೆ ತಲುಪಿದೆ. ಈ ವರ್ಷದಲ್ಲಿ ಇದುವರೆಗೆ ಎಚ್‌ಡಿಎಫ್‌ಸಿ ಬ್ಯಾಂಕ್‌ ಷೇರುಗಳು ಶೇ 15.11ರಷ್ಟು ಗಳಿಕೆ ಕಂಡುಕೊಂಡಿವೆ.

ಮಾರುಕಟ್ಟೆ ಬಂಡವಾಳದ ಲೆಕ್ಕದಲ್ಲಿ, ದೇಶದ ಅತ್ಯಂತ ಮೌಲ್ಯಯುತ ಕಂಪನಿಗಳ ಪಟ್ಟಿಯಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್‌ ಮೂರನೇ ಸ್ಥಾನದಲ್ಲಿದೆ. ₹ 13.30 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ ಹೊಂದುವ ಮೂಲಕ ರಿಲಯನ್ಸ್‌ ಇಂಡಸ್ಟ್ರೀಸ್‌ ಮೊದಲ ಸ್ಥಾನದಲ್ಲಿದ್ದು, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ಕಂಪನಿಯು ₹ 10.13 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯದೊಂದಿಗೆ ಎರಡನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT