ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಎಫ್‌ಸಿ ಬ್ಯಾಂಕ್‌ ಲಾಭ ಶೇ 29ರಷ್ಟು ಹೆಚ್ಚಳ

Published 17 ಜುಲೈ 2023, 15:26 IST
Last Updated 17 ಜುಲೈ 2023, 15:26 IST
ಅಕ್ಷರ ಗಾತ್ರ

ಮುಂಬೈ: ಎಚ್‌ಡಿಎಫ್‌ಸಿ ಬ್ಯಾಂಕ್‌ನ ನಿವ್ವಳ ಲಾಭವು ಜೂನ್‌ ತ್ರೈಮಾಸಿಕದಲ್ಲಿ ಶೇಕಡ 29ರಷ್ಟು ಹೆಚ್ಚಾಗಿದ್ದು ₹12,370 ಕೋಟಿಗೆ ತಲುಪಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ ₹9,679 ಕೋಟಿ ನಿವ್ವಳ ಲಾಭ ಗಳಿಸಿತ್ತು. ಬ್ಯಾಂಕ್‌ನ ಒಟ್ಟು ವರಮಾನವು ₹44,202 ಕೋಟಿಯಿಂದ ₹61,021 ಕೋಟಿಗೆ ಏರಿಕೆ ಕಂಡಿದೆ.

ಜುಲೈ 1ರಿಂದ ಜಾರಿಗೆ ಬರುವಂತೆ ಎಚ್‌ಡಿಎಫ್‌ಸಿ ಲಿಮಿಟೆಡ್‌, ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ವಿಲೀನಗೊಂಡಿದೆ.

ಕಾರ್ಯಾಚರಣಾ ವೆಚ್ಚವು ₹14,057 ಕೋಟಿಗೆ, ಅಂದರೆ ಶೇ 33.9ರಷ್ಟು, ಏರಿಕೆ ಕಂಡಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 1.28ರಿಂದ ಶೇ 1.17ಕ್ಕೆ ಇಳಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT