ಮುಂಬೈ: ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಆಗಿರುವ ಎಚ್ಡಿಎಫ್ಸಿ ಬ್ಯಾಂಕ್ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹19,610 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಡಿದ್ದ ಲಾಭಕ್ಕೆ ಹೋಲಿಸಿದರೆ ಶೇಕಡ 10ರಷ್ಟು ಹೆಚ್ಚು.

ಬ್ಯಾಂಕ್ನ ನಿವ್ವಳ ಬಡ್ಡಿ ವರಮಾನವು ಶೇ 4.8ರಷ್ಟು ಹೆಚ್ಚಾಗಿ ₹31,550 ಕೋಟಿಗೆ ತಲುಪಿದೆ. ಸಾಲ ನೀಡಿಕೆಯು ಶೇ 10ರಷ್ಟು ಹೆಚ್ಚಾಗಿದೆ. ನಿವ್ವಳ ಬಡ್ಡಿ ವರಮಾನ ಪ್ರಮಾಣವು ಮುಂದಿನ ಒಂದು ಅಥವಾ ಎರಡು ವರ್ಷಗಳವರೆಗೆ ಇದೇ ಮಟ್ಟದಲ್ಲಿ ಉಳಿಯಬಹುದು ಅಥವಾ ಇನ್ನೂ ಹೆಚ್ಚಾಗಬಹುದು ಎಂದು ಬ್ಯಾಂಕ್ನ ಆಡಳಿತ ಮಂಡಳಿಯು ವಿಶ್ವಾಸ ವ್ಯಕ್ತಪಡಿಸಿದೆ.

ಸಾಲ ನೀಡಿಕೆ ಪ್ರಮಾಣವು ಮುಂದಿನ ವರ್ಷಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯ ಸಾಲ ನೀಡಿಕೆಯ ಸರಾಸರಿ ಪ್ರಮಾಣಕ್ಕಿಂತ ಹೆಚ್ಚಳ ಕಾಣಲಿದೆ, ಮಾರುಕಟ್ಟೆಯಲ್ಲಿ ಬ್ಯಾಂಕ್ನ ಪಾಲು ಹೆಚ್ಚಾಗಲಿದೆ ಎಂದು ಎಚ್ಡಿಎಫ್ಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಶಶಿಧರ ಜಗದೀಶನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.