ಗುರುವಾರ , ಆಗಸ್ಟ್ 5, 2021
28 °C

ಎಚ್‌ಡಿಎಫ್‌ಸಿ ಬ್ಯಾಂಕ್‌ ಲಾಭ ಶೇ 14ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ನಿವ್ವಳ ಲಾಭವು ಜೂನ್‌ ತ್ರೈಮಾಸಿಕದಲ್ಲಿ ಶೇ 14.36ರಷ್ಟು ಹೆಚ್ಚಾಗಿದ್ದು ₹ 7,922 ಕೋಟಿಗಳಿಗೆ ತಲುಪಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ನ ನಿವ್ವಳ ಲಾಭ ₹ 6,927 ಕೋಟಿಗಳಷ್ಟಿತ್ತು. ಈ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಆಗಿದ್ದ ₹ 8,433 ಕೋಟಿ ನಿವ್ವಳ ಲಾಭಕ್ಕೆ ಹೋಲಿಸಿದರೆ ಜೂನ್‌ ತ್ರೈಮಾಸಿಕದ ನಿವ್ವಳ ಲಾಭದಲ್ಲಿ ಇಳಿಕೆ ಕಂಡುಬಂದಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಬ್ಯಾಂಕ್‌ನ ಒಟ್ಟಾರೆ ವರಮಾನ ₹ 34,453 ಕೋಟಿಗಳಿಂದ ₹ 36,771 ಕೋಟಿಗಳಿಗೆ ಏರಿಕೆ ಆಗಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 1.36 ರಿಂದ ಶೇ 1.47ಕ್ಕೆ ಏರಿಕೆ ಆಗಿದೆ ಎಂದು ವರದಿಯಲ್ಲಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು