ಗುರುವಾರ , ಆಗಸ್ಟ್ 5, 2021
21 °C

ಎಚ್‌ಡಿಎಫ್‌ಸಿ ಬ್ಯಾಂಕ್‌ ಲಾಭ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 2020–21ನೇ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ನಿವ್ವಳ ಲಾಭ ಶೇ 20ರಷ್ಟು ಹೆಚ್ಚಾಗಿದ್ದು, ₹ 6,658 ಕೋಟಿಗೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್‌ ಶನಿವಾರ ತಿಳಿಸಿದೆ.

2019–20ನೇ ಹಣಕಾಸು ವರ್ಷದ ಏಪ್ರಿಲ್‌–ಜೂನ್‌ ಅವಧಿಯಲ್ಲಿ ಕಂಪನಿಯ ನಿವ್ವಳ ಲಾಭ ₹5,568 ಕೋಟಿ ಇತ್ತು.

ಬಡ್ಡಿವರಮಾನದಲ್ಲಿನ ಏರಿಕೆಯಿಂದಾಗಿ ಈ ಬೆಳವಣಿಗೆ ಸಾಧ್ಯವಾಗಿದೆ ಎಂದು ಹೇಳಿದೆ.

ಬ್ಯಾಂಕ್‌ನ ವರಮಾನ ₹ 32,361 ಕೋಟಿಗಳಿಂದ ₹ 34,453 ಕೋಟಿಗಳಿಗೆ ಏರಿಕೆಯಾಗಿದೆ.

ನಿವ್ವಳ ಬಡ್ಡಿ ವರಮಾನ ಶೇ 17.8ರಷ್ಟು ಹೆಚ್ಚಾಗಿದ್ದು, ₹ 13,294 ಕೋಟಿಗಳಿಂದ ₹ 15,665 ಕೋಟಿಗಳಿಗೆ ಏರಿಕೆಯಾಗಿದೆ.

ವಸೂಲಾಗದ ಸಾಲವು ಶೇ 0.43ರಿಂದ ಶೇ 0.33ಕ್ಕೆ ಇಳಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು