ನವದೆಹಲಿ: ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಚ್‌ಡಿಎಫ್‌ಸಿ ಲಿಮಿಟೆಡ್ ವಿಲೀನ ಮಾಡುವ ಸಂಬಂಧ ಷೇರುದಾರರ ಸಭೆ ಕರೆಯಲು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಒಪ್ಪಿಗೆ ನೀಡಿದೆ.

ವಿಲೀನ ಯೋಜನೆಗೆ ಒಪ್ಪಿಗೆ ನೀಡುವ ಸಂಬಂಧ ನವೆಂಬರ್ 25ರಂದು ಷೇರುದಾರರ ಸಭೆ ನಡೆಸಲಾಗುವುದು ಎಂದು ಎಚ್‌ಡಿಎಫ್‌ಸಿ ಲಿಮಿಟೆಡ್ ಷೇರುಪೇಟೆಗೆ ತಿಳಿಸಿದೆ.

ಎಚ್‌ಡಿಎಫ್‌ಸಿ ಪ್ರಾಪರ್ಟಿ ವೆಂಚರ್ ಲಿಮಿಟೆಡ್ (ಎಚ್‌ಪಿವಿಎಲ್) ಅನ್ನು ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ವರ್ಗಾಯಿಸುವ ಸಂಬಂಧ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಒಪ್ಪಿಗೆಯನ್ನೂ ಪಡೆಯಲಾಗಿದೆ ಎಂದು ಅದು ಹೇಳಿದೆ.

ವಿಲೀನ ಒಪ್ಪಂದಕ್ಕೆ ಆರ್‌ಬಿಐ, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್‌ಆರ್‌ಡಿಎ) ಮತ್ತು ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಒಪ್ಪಿಗೆಯನ್ನು ಪಡೆಯಲಾಗಿದೆ.

ವಿಲೀನದ ಬಳಿಕ ಒಟ್ಟು ಸಂಪತ್ತು ಮೌಲ್ಯವು ₹17.87 ಲಕ್ಷ ಕೋಟಿಗೆ ತಲುಪಲಿದೆ. 2024ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.