ಎಲ್‌ಪಿಜಿ ವಿತರಣೆ ಮೀಸಲು: ಪಿಐಎಲ್‌ ವಜಾ

7

ಎಲ್‌ಪಿಜಿ ವಿತರಣೆ ಮೀಸಲು: ಪಿಐಎಲ್‌ ವಜಾ

Published:
Updated:

ಬೆಂಗಳೂರು: ‘ಕರ್ನಾಟಕ ವಲಯದಲ್ಲಿ ಎಲ್‌ಪಿಜಿ ವಿತರಕರ ನೇಮಕಾತಿಯಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಶೇ 5ರಷ್ಟು ಮೀಸಲು ಒದಗಿಸಲು ಕೇಂದ್ರ ಸರ್ಕಾರ ಹಾಗೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹೈಕೋರ್ಟ್ ವಜಾ ಮಾಡಿದೆ.

‘ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ’ ಸಲ್ಲಿಸಿದ್ದ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಸುನೀಲ್ ದತ್‌ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಎಲ್‌ಪಿಜಿ ವಿತರಕರ ನೇಮಕಾತಿಯಲ್ಲಿ ಮಾರ್ಗಸೂಚಿಗಳ ಅನ್ವಯವೇ ಶೇ 3ರಷ್ಟು ಮೀಸಲು ನೀಡಲಾಗಿದೆ. ಇದು ನ್ಯಾಯಸಮ್ಮತವಾಗಿದೆ. ಇದರಲ್ಲಿ ಕೋರ್ಟ್‌ ಮಧ್ಯ ಪ್ರವೇಶಿಸುವ ಅಗತ್ಯ ಕಂಡು ಬರುತ್ತಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕರ್ನಾಟಕ ವಲಯದಲ್ಲಿ 238 ಎಲ್‌ಪಿಜಿ ವಿತರಕರ ನೇಮಕಾತಿಗೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ 2018ರ ಫೆಬ್ರುವರಿ 9ರಂದು ನೀಡಿದ್ದ ತಡೆಯಾಜ್ಞೆಯನ್ನು ನ್ಯಾಯಪೀಠ ಇದೇ ವೇಳೆ ತೆರವುಗೊಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !