ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿಯಲ್ಲಿ ಮುಂದುವರಿಯಲಿದೆ ಶೇಕಡ 28ರ ತೆರಿಗೆ ಮಟ್ಟ

Last Updated 4 ಜುಲೈ 2022, 16:01 IST
ಅಕ್ಷರ ಗಾತ್ರ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿನ ಶೇಕಡ 28ರ ತೆರಿಗೆ ಪ್ರಮಾಣವನ್ನು ಮುಂದುವರಿಸಿಕೊಂಡು ಹೋಗುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದೆ ಎಂದು ರೆವಿನ್ಯು ಕಾರ್ಯದರ್ಶಿ ತರುಣ್ ಬಜಾಜ್ ಹೇಳಿದ್ದಾರೆ.

‘ಆದರೆ, ಇನ್ನುಳಿದ ಮೂರು ಹಂತಗಳನ್ನು (ಶೇ 5, 12 ಮತ್ತು 18) ಎರಡು ಹಂತಗಳಿಗೆ ತಗ್ಗಿಸುವ ವಿಚಾರದಲ್ಲಿ ಚರ್ಚೆಗೆ ಸರ್ಕಾರ ಮುಕ್ತವಾಗಿದೆ’ ಎಂದು ಅವರು ತಿಳಿಸಿದ್ದಾರೆ. ಐಷಾರಾಮಿ ಉತ್ಪನ್ನಗಳಿಗೆ, ತಂಬಾಕಿನಂತಹ ಉತ್ಪನ್ನಗಳಿಗೆ ಶೇ 28ರಷ್ಟು ತೆರಿಗೆ ವಿಧಿಸಲಾಗುತ್ತಿದೆ.

ಅಸೋಚಾಂ ಕಾರ್ಯಕ್ರಮದಲ್ಲಿ ಉದ್ಯಮ ವಲಯದ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯವಸ್ಥೆಯ ಅಡಿ ತರಬೇಕು ಎಂಬ ಬೇಡಿಕೆಯ ಬಗ್ಗೆ ಅವರು, ‘ಈ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೆಲವು ಆತಂಕಗಳಿವೆ. ತುಸು ಕಾಲ ಕಾಯಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT