ಶನಿವಾರ, ಏಪ್ರಿಲ್ 1, 2023
31 °C

ಶೇ 10ರಷ್ಟು ಬೆಳವಣಿಗೆ ಕಾಣಲಿವೆ ಗೃಹ ಹಣಕಾಸು ಕಂಪನಿಗಳು: ಐಸಿಆರ್‌ಎ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಗೃಹ ಹಣಕಾಸು ಕಂಪನಿಗಳು (ಎಚ್‌ಎಫ್‌ಎಸ್‌) ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 8ರಿಂದ ಶೇ 10ರಷ್ಟು ಬೆಳವಣಿಗೆ ಕಾಣುವ ಸಾಧ್ಯತೆ ಇದೆ ಎಂದು ರೇಟಿಂಗ್ಸ್‌ ಸಂಸ್ಥೆ ಐಸಿಆರ್‌ಎ ಸೋಮವಾರ ಹೇಳಿದೆ.

ಬೇಡಿಕೆ ಹೆಚ್ಚಾಗುತ್ತಿರುವುದು ಮತ್ತು ಆರ್ಥಿಕತೆಯಲ್ಲಿನ ಚೇತರಿಕೆಯಿಂದಾಗಿ ಈ ಪ್ರಮಾಣದ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಅದು ತಿಳಿಸಿದೆ.

ಕೋವಿಡ್‌ನ ಎರಡನೇ ಅಲೆಯಿಂದಾಗಿ ಈ ಕಂಪನಿಗಳ ಸಾಲ ವಿತರಣೆ ಮತ್ತು ಸಂಗ್ರಹದ ಮೇಲೆ ಪರಿಣಾಮ ಉಂಟಾಗಿತ್ತು. ಹೀಗಾಗಿ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಈ ಕಂಪನಿಗಳು ಶೂನ್ಯ ಪ್ರಗತಿ ಕಂಡಿದ್ದವು ಎಂದು ಸಂಸ್ಥೆಯು ತನ್ನ ಪ್ರಕಟಣೆಯಲ್ಲಿ ಹೇಳಿದೆ.

ಜೂನ್‌ ಅಂತ್ಯದ ವೇಳೆಗೆ ಸಾಲ ಸಂಗ್ರಹ ಸಾಮರ್ಥ್ಯ ಚೇತರಿಸಿಕೊಂಡಿದ್ದು, ಎರಡನೇ ತ್ರೈಮಾಸಿಕದಲ್ಲಿ ಇನ್ನಷ್ಟು ಸುಧಾರಣೆ ಕಂಡುಬಂದಿದೆ ಎಂದು ಅದು ತಿಳಿಸಿದೆ.

ಉದ್ಯಮದಲ್ಲಿ ಆರೋಗ್ಯಕರ ಬೆಳವಣಿಗೆ ಕಂಡುಬರುತ್ತಿದೆ. ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತಿವೆ. ದೇಶದಲ್ಲಿ ಕೋವಿಡ್‌ ಲಸಿಕೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಸಾಲ ವಿತರಣೆಯಲ್ಲಿ ಪ್ರಗತಿ ಮತ್ತು ಸಾಲ ಸಂಗ್ರಹ ಸಾಮರ್ಥ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆ.

ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಜಿಎನ್‌ಪಿಎ) ಮಾರ್ಚ್‌ 31ರ ವೇಳೆಗೆ ಶೇ 2.9ರಷ್ಟು ಇದ್ದಿದ್ದು ಜೂನ್‌ 30ರ ವೇಳೆಗೆ ಶೇ 3.6ಕ್ಕೆ ಏರಿಕೆ ಆಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು