ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಪಿಸಿಎಲ್‌ಗೆ ₹529 ಕೋಟಿ ಲಾಭ

Published 25 ಜನವರಿ 2024, 15:29 IST
Last Updated 25 ಜನವರಿ 2024, 15:29 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಹಿಂದುಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ (ಎಚ್‌ಪಿಸಿಎಲ್‌) 2023–24ನೇ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಶೇ 3.73ರಷ್ಟು ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಕಂಪನಿಯು ₹172.43 ಕೋಟಿ ಲಾಭ ಗಳಿಸಿತ್ತು. ಈ ಬಾರಿ ₹592.02 ಕೋಟಿ ಗಳಿಸಿದೆ. ಹಿಂದಿನ ಸಾಲಿಗೆ ಹೋಲಿಸಿದರೆ ಆದಾಯದಲ್ಲಿ ಮೂರು ಪಟ್ಟು ಹೆಚ್ಚಳವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿತದ ಹೊರತಾಗಿಯೂ 21 ತಿಂಗಳುಗಳಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದಲ್ಲಿ  ದರ ಕಡಿತಗೊಳಿಸಿಲ್ಲ. ಆದರೆ, ಕಚ್ಚಾ ತೈಲದ ದರ ಕಡಿಮೆಯಾದ ವೇಳೆ ಖರೀದಿ ಮತ್ತು ಸಂಸ್ಕರಣೆಯಲ್ಲಿ ವಿಳಂಬವಾಗಿದ್ದರಿಂದ ಕಂಪನಿಯು ನಷ್ಟ ಅನುಭವಿಸಿತ್ತು. ಅದರಿಂದ ಆಗಿದ್ದ ನಷ್ಟವನ್ನು ಈಗ ಸರಿದೂಗಿಸಿಕೊಳ್ಳಲಾಗಿದೆ ಎಂದು ಕಂಪನಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT