ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಪಿಸಿಎಲ್‌ಗೆ ₹5,827 ಕೋಟಿ ಲಾಭ

Published 6 ನವೆಂಬರ್ 2023, 16:14 IST
Last Updated 6 ನವೆಂಬರ್ 2023, 16:14 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಹಿಂದುಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ (ಎಚ್‌ಪಿಸಿಎಲ್‌) ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹5,827 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹2,475 ಕೋಟಿಯಷ್ಟು ನಷ್ಟ ಆಗಿತ್ತು ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ. ಕಚ್ಚಾ ತೈಲ ದರ ಇಳಿಕೆ ಆಗಿದ್ದರೂ ಪೆಟ್ರೋಲ್‌, ಡೀಸೆಲ್‌ ಮಾರಾಟ ದರ ಕಡಿಮೆ ಮಾಡದೇ ಇದ್ದಿದ್ದರಿಂದ ಲಾಭ ಆಗಿದೆ. ಆದರೆ, ಕಳೆದ ವರ್ಷ ಕಚ್ಚಾ ತೈಲ ದರ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದ್ದಾಗ ಇಂಧನ ಮಾರಾಟ ದರ ಹೆಚ್ಚಿಸಿರಲಿಲ್ಲ. ಅದರಿಂದ ಆಗಿದ್ದ ನಷ್ಟವನ್ನು ಈಗ ಸರಿಪಡಿಸಿಕೊಳ್ಳಲಾಗಿದೆ ಎಂದು ಕಂಪನಿ ತಿಳಿಸಿದೆ.

ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ವರಮಾನವು ₹1.13 ಲಕ್ಷ ಕೋಟಿಯಿಂದ ₹1.02 ಲಕ್ಷ ಕೋಟಿಗೆ ಇಳಿಕೆ ಕಂಡಿದೆ ಎಂದು ಹೇಳಿದೆ. 2022ರ ಏಪ್ರಿಲ್‌–ಸೆಪ್ಟೆಂಬರ್ ಅವಧಿಯಲ್ಲಿ ಕಂಪನಿಗೆ ₹15,118 ಕೋಟಿ ನಷ್ಟ ಆಗಿತ್ತು. 2023ರ ಏಪ್ರಿಲ್‌–ಸೆಪ್ಟೆಂಬರ್ ಅವಧಿಯಲ್ಲಿ ₹16,389 ಕೋಟಿ ಲಾಭ ಗಳಿಸಿಕೊಂಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT