ಹುಬ್ಬಳ್ಳಿ: ಇಲ್ಲಿನ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯ ವ್ಯಾಪಾರಸ್ಥರ ಸಂಘ ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ (ಕೆಸಿಸಿಐ) ಆಡಳಿತ ಮಂಡಳಿಗಳ ಜಂಟಿ ಸಭೆ ವ್ಯಾಪಾರಸ್ಥರ ಸಂಘದ ಕಟ್ಟಡದಲ್ಲಿ ಈಚೆಗೆ ನಡೆಯಿತು.

ಮಾರುಕಟ್ಟೆಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ, ಮಾರುಕಟ್ಟೆಯ ಸರ್ವತೋಮುಖ ಬೆಳವಣಿಗೆ ಕುರಿತು ಉತ್ತರ ಕರ್ನಾಟಕ ಭಾಗದ ಎಪಿಎಂಸಿ ವರ್ತಕರ ಸಭೆ ನಡೆಸಿ, ಸಂಸ್ಥೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೆಸಿಸಿಐನಿಂದ ಎಪಿಎಂಸಿ ಆವರಣದ ವಿವಿಧೋದ್ದೇಶ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ಬೃಹತ್ ಕೈಗಾರಿಕಾ ವಸ್ತು ಪ್ರದರ್ಶನ ‘ಇನ್ಕಾಮೆಕ್ಸ್-2026‘ ಉದ್ಘಾಟನೆಗೆ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಲಾಗಿದೆ. ವರ್ತಕರೆಲ್ಲರೂ ಭಾಗವಹಿಸಬೇಕು ಎಂದು ಕೆಸಿಸಿಐ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ ಕೋರಿದರು.

ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾಜಕಿರಣ ಬಿ. ಮೆಣಸಿನಕಾಯಿ, ಜಿ.ಕೆ. ಆದಪ್ಪಗೌಡರ ಅಧ್ಯಕ್ಷತೆ ವಹಿಸಿದ್ದರು. ಶ್ರೀನಿವಾಸ ಸೋಳಂಕಿ, ಅಶೋಕ ಎಸ್. ಬಾಳಿಕಾಯಿ, ಚಂದ್ರಶೇಖರ ಪೂಜಾರ, ಪ್ರವೀಣ ಅಗಡಿ, ಎಸ್.ಜಿ. ಕಮ್ಮಾರ, ವೀರಣ್ಣ ಕಲ್ಲೂರ, ಉದಯ ರೇವಣಕರ, ಪ್ರಕಾಶ ಶೃಂಗೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-22-1769920797

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.