ಶನಿವಾರ, ಏಪ್ರಿಲ್ 4, 2020
19 °C

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ’ಉಡಾನ್‘ ಪ್ರಾದೇಶಿಕ ಸಂಪರ್ಕ ಯೋಜನೆ ಅಡಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಉತ್ತಮ ವಿಮಾನ ನಿಲ್ದಾಣ ಪ್ರಶಸ್ತಿ ನೀಡಿ ಗೌರವಿಸಿದೆ.

ಕೇಂದ್ರ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಾಣಿಜ್ಯೋದ್ಯಮ ಸಂಸ್ಥೆಯ ಸಹಯೋಗದಲ್ಲಿ ಹೈದರಾಬಾದ್‌ನ ಬೇಗಂಪೇಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ ಠಾಕ್ರೆ ಪ್ರಶಸ್ತಿ ಸ್ವೀಕರಿಸಿದರು.

ಉಡಾನ್ ಎರಡನೇ ಹಂತದ ಯೋಜನೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಲ್ಕು ವಿಮಾನಯಾಮ ಸಂಸ್ಥೆಗಳಿಂದ 9 ಮಾರ್ಗಗಳನ್ನು ನೀಡಲಾಗಿದೆ. ಈ ಹಿಂದೆ ನೀಡಲಾಗಿದ್ದ ಎಲ್ಲಾ 9 ಮಾರ್ಗಗಳನ್ನು ಈ ನಿಲ್ದಾಣ ಸಮರ್ಥವಾಗಿ ನಿರ್ವಹಿಸಿದೆ. ಪ್ರತಿವರ್ಷ ಉತ್ತಮ ಪ್ರಗತಿ ಹೊಂದುತ್ತಿದೆ. 2017ರಿಂದ 19ರ ಅವಧಿಯಲ್ಲಿ ವಿಮಾನ ಸಂಚಾರ ಬೆಳವಣಿಗೆಯು ಶೇ 500 ರಷ್ಟು ಹಾಗೂ ಪ್ರಯಾಣಿಕರ ಓಡಾಟವೂ ಶೇ 800 ರಷ್ಟು ವೃದ್ಧಿಯಾಗಿದೆ.

2019–20ನೇ ಸಾಲಿನ ಜನವರಿ ಅಂತ್ಯದವರೆಗೆ 4.11 ಲಕ್ಷ ಜನರಿಗೆ ಸೇವೆ ನೀಡಲಾಗಿದೆ. ಈ ಆರ್ಥಿಕ ವರ್ಷಾಂತ್ಯಕ್ಕೆ 5 ಲಕ್ಷ ಜನರನ್ನು ತಲುಪುವ ನಿರೀಕ್ಷೆ ಇದೆ. ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಮೋದ ಠಾಕ್ರೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು