ಶನಿವಾರ, ನವೆಂಬರ್ 28, 2020
22 °C

ಎಚ್‌ಯುಎಲ್‌ ಹೊಸ ಬ್ರ್ಯಾಂಡ್‌ ‘ನೇಚರ್‌ ಪ್ರೊಟೆಕ್ಟ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಿಂದುಸ್ತಾನ್‌ ಯೂನಿಲಿವರ್‌ ಲಿಮಿಟೆಡ್‌ (ಎಚ್‌ಯುಎಲ್‌) ಕಂಪನಿಯು ‘ನೇಚರ್‌ ಪ್ರೊಟೆಕ್ಟ್‌’ ಎನ್ನುವ ಹೊಸ ಬ್ರ್ಯಾಂಡ್‌ ಅಡಿ ಮನೆ ಸ್ವಚ್ಛಗೊಳಿಸಲು ಬಳಸುವ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ.

ಬೇವಿನ ಸಾರವನ್ನು ಬಳಸಿಕೊಂಡು ತಯಾರಿಸಿರುವ ಡಿಟರ್ಜೆಂಟ್‌ ಪೌಡರ್‌, ನೆಲ ಸ್ವಚ್ಛಗೊಳಿಸುವ ಸ್ಪ್ರೇ ಇತ್ಯಾದಿ ಉತ್ಪನ್ನಗಳು ಈ ಬ್ರ್ಯಾಂಡ್‌ ಅಡಿ ಮಾರುಕಟ್ಟೆಗೆ ಬಂದಿವೆ.

‘ಪ್ರಸ್ತುತ ಸನ್ನಿವೇಶದಲ್ಲಿ ಸ್ವಚ್ಛತೆ ಹೆಚ್ಚಿನ ಪ್ರಾಮುಖ್ಯ ಪಡೆದುಕೊಳ್ಳುತ್ತಿದೆ. ಗ್ರಾಹಕರು ಸುರಕ್ಷಿತ ಮತ್ತು ಪರಿಣಾಮಕಾರಿ ಉತ್ಪನ್ನಗಳನ್ನು ಹುಡುಕುತ್ತಿದ್ದಾರೆ ಎಂಬುದು ನಮ್ಮ ಸಂಶೋಧನೆಯಿಂದ ತಿಳಿದುಬಂದಿದೆ’ ಎಂದು ಹಿಂದೂಸ್ತಾನ್ ಯೂನಿಲಿವರ್‌ನ ಅಧ್ಯಕ್ಷ ಸಂಜೀವ್ ಮೆಹ್ತಾ ಹೇಳಿದ್ದಾರೆ.

ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಇರುವ ಕಂಪನಿಯ ಮಳಿಗೆಗಳಲ್ಲಿ ಹಾಗೂ ಅಮೆಜಾನ್‌ ಜಾಲತಾಣದಲ್ಲಿ ಈ ಉತ್ಪನ್ನಗಳು ಲಭ್ಯವಿವೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು