ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯುತ್ತಮ ಕಾರ್ಯಕ್ಷಮತೆ: ಬೆಂಗಳೂರು ಏರ್‌ಪೋರ್ಟ್‌ಗೆ 3ನೇ ಸ್ಥಾನ

ವಿಶ್ವದ ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿರುವ 10 ವಿಮಾನ ನಿಲ್ದಾಣದ ಪಟ್ಟಿ ಬಿಡುಗಡೆ
Published 2 ಜನವರಿ 2024, 15:28 IST
Last Updated 2 ಜನವರಿ 2024, 15:28 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದ 10 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ದೇಶದ ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು, ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿವೆ.

2023ರಲ್ಲಿ ಜಾಗತಿಕ ಮಟ್ಟದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿರುವ ವಿಮಾನ ನಿಲ್ದಾಣಗಳ ಪಟ್ಟಿಯನ್ನು ವಿಮಾನಯಾನ ವಿಶ್ಲೇಷಣಾ ಸಂಸ್ಥೆಯಾದ ಸಿರಿಯಮ್‌ ಮಂಗಳವಾರ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಅಮೆರಿಕದ ಮಿನ್ನಿಯಾಪೊಲೀಸ್‌ನ ಸೇಂಟ್‌ ಪಾಲ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಮೊದಲ ಸ್ಥಾನ ಪಡೆದಿದೆ.

ಮಧ್ಯಮ ವಿಭಾಗಗಳ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಕೋಲ್ಕತ್ತದ ನೇತಾಜಿ ಸುಭಾಷ್ ಚಂದ್ರಬೋಸ್‌ ವಿಮಾನ ನಿಲ್ದಾಣವು ಒಂಬತ್ತನೇ ಸ್ಥಾನ ಪಡೆದಿದೆ. ಜಪಾನ್‌ನ ಒಸಕಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಈ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿದೆ.

ಇಂಡಿಗೊಗೆ ಸ್ಥಾನ:

ಕಡಿಮೆ ವೆಚ್ಚದ ಸಾಗಾಣಿಕೆ ವಿಭಾಗದಲ್ಲಿ ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೊ ಎಂಟನೇ ಸ್ಥಾನ ಪಡೆದಿದೆ. ದಕ್ಷಿಣ ಆಫ್ರಿಕಾದ ಸಫೇರ್ ವಿಮಾನ ಸಂಸ್ಥೆಯು ಈ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT