ಗುರುವಾರ , ಮಾರ್ಚ್ 23, 2023
28 °C

ಹುಂಡೈ ಐ20 ಎನ್‌ ಲೈನ್‌ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹುಂಡೈ ಮೋಟರ್ ಇಂಡಿಯಾ ಕಂಪನಿಯು ‌‘ಐ20 ಎನ್‌ ಲೈನ್‌’ ಕಾರನ್ನು ಗುರುವಾರ ಬಿಡುಗಡೆ ಮಾಡಿದೆ. ಇದರ ಎಕ್ಸ್‌ ಷೋರೂಂ ಬೆಲೆಯು ₹ 9.84 ಲಕ್ಷದಿಂದ ₹ 11.76 ಲಕ್ಷದವರೆಗೆ ಇದೆ.

ಈ ಕಾರು 1 ಲೀಟರ್‌ ಟರ್ಬೊ ಪೆಟ್ರೋಲ್‌ ಎಂಜಿನ್‌ ಹೊಂದಿದ್ದು, 88.3 ಕಿಲೋವಾಟ್‌ ಶಕ್ತಿ ಉತ್ಪಾದಿಸಬಲ್ಲದು. ಎನ್‌6 ಮತ್ತು ಎನ್‌8 ಆವೃತ್ತಿಗಳಲ್ಲಿ ಐ20 ಎನ್‌ ಲೈನ್ ಪರಿಚಯಿಸಲಾಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಮೋಟಾರ್‌ಸ್ಪೋರ್ಟ್ಸ್‌ನಿಂದ ಸ್ಪೂರ್ತಿ ಪಡೆದು ಈ ಕಾರನ್ನು ವಿನ್ಯಾಸಗೊಳಿಸಲಾಗಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎಸ್‌.ಕಿಮ್‌ ತಿಳಿಸಿದ್ದಾರೆ.

ಎಲೆಕ್ಟ್ರಿಕ್‌ ಸ್ಟೆಬಿಲಿಟಿ ಕಂಟ್ರೋಲ್‌ (ಇಎಸ್‌ಸಿ), ಹಿಲ್‌ ಅಸಿಸ್ಟ್‌ ಕಂಟ್ರೋಲ್‌ನಂತಹ (ಎಚ್ಎಸಿ) ಸುರಕ್ಷತಾ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ ಎಂದು ಕಂಪನಿಯು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು