ಗುರುವಾರ , ಸೆಪ್ಟೆಂಬರ್ 23, 2021
27 °C

ಕಾರು ಖರೀದಿಗೆ ಆನ್‌ಲೈನ್‌ನತ್ತ ಗ್ರಾಹಕರು: ಹುಂಡೈ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾರ್‌ಗಳನ್ನು ಖರೀದಿಸುವ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಪಡೆಯುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ ಎಂದು ಹುಂಡೈ ಮೋಟರ್‌ ಇಂಡಿಯಾ ಕಂಪನಿಯು ತಿಳಿಸಿದೆ.

‘ಕ್ಲಿಕ್‌ ಟು ಬೈ’   ಆನ್‌ಲೈನ್‌ ಸೌಲಭ್ಯವನ್ನು ಮಾರ್ಚ್‌ನಲ್ಲಿ ಆರಂಭಿಸಿದ್ದು, ಇದುವರೆಗೆ 15 ಲಕ್ಷ ಜನರು ಜಾಲತಾಣಕ್ಕೆ ಭೇಟಿ ನೀಡಿದ್ದು, 20 ಸಾವಿರಕ್ಕೂ ಹೆಚ್ಚು ಜನರು ವಿವರಗಳನ್ನು ಕೇಳಿದ್ದಾರೆ ಎಂದು ಮಾಹಿತಿ ನೀಡಿದೆ.

ಕೋವಿಡ್‌ ಸಂದರ್ಭದಲ್ಲಿ ಜನರು ಷೋರೂಂಗಳಿಗೆ ಭೇಟಿ ನೀಡದೇ ಸಂಪೂರ್ಣವಾಗಿ ಆನ್‌ಲೈನ್‌ ಮೂಲಕವೇ ಕಾರ್‌ ಖರೀದಿಸಲು ಅನುಕೂಲ ಆಗುವಂತೆ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

ಬ್ಯಾಂಕ್‌ ಶಾಖೆಗಳಿಗೆ ಭೇಟಿ ನೀಡದೇ ವಾಹನ ಸಾಲ ಪಡೆಯಲು ಅನುಕೂಲ ಆಗುವಂತೆ ಎಚ್‌ಡಿಎಫ್‌ಸಿ ಮತ್ತು ಐಸಿಐಸಿಐ ಬ್ಯಾಂಕ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದೂ ಹೇಳಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು