ನವದೆಹಲಿ (ಪಿಟಿಐ): ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿ ಹೊಂದಿರುವ ₹ 814 ಕೋಟಿಗಿಂತ ಹೆಚ್ಚಿನ ಮೊತ್ತಕ್ಕೆ ಸಂಬಂಧಿಸಿದ ₹ 420 ಕೋಟಿ ತೆರಿಗೆ ವಂಚಿಸಿದ ಆರೋಪದ ಅಡಿಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಅವರ ವಿರುದ್ಧ ಕ್ರಮ ಜರುಗಿಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ.

ಅನಿಲ್ ಅಂಬಾನಿ ಅವರು ಉದ್ದೇಶಪೂರ್ವಕವಾಗಿ ತೆರಿಗೆ ವಂಚಿಸಿದ್ದಾರೆ, ವಿದೇಶದ ಬ್ಯಾಂಕ್ ಖಾತೆ ವಿವರಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ ಎಂದು ಇಲಾಖೆ ಆರೋಪಿಸಿದೆ. ಈ ವಿಚಾರವಾಗಿ ಆಗಸ್ಟ್ ಆರಂಭದಲ್ಲಿ ಅನಿಲ್ ಅಂಬಾನಿ ಅವರಿಗೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ.

ಕಪ್ಪು ಹಣ (ಅಘೋಷಿತ ವಿದೇಶಿ ಆದಾಯ ಮತ್ತು ಆಸ್ತಿ) ತೆರಿಗೆ ಹೇರಿಕೆ ಕಾಯ್ದೆ – 2015ರ ಸೆಕ್ಷನ್ 50 ಮತ್ತು 51ರ ಅಡಿಯಲ್ಲಿ ಅನಿಲ್ ಅಂಬಾನಿ ವಿರುದ್ಧ ಕ್ರಮ ಜರುಗಿಸಬಹುದು ಎಂದು ಇಲಾಖೆ ಹೇಳಿದೆ. ಈ ಕಾನೂನಿನ ಅಡಿಯಲ್ಲಿ ಗರಿಷ್ಠ 10 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ. ಆರೋಪಗಳ ಕುರಿತು ಆಗಸ್ಟ್ 31ರೊಳಗೆ ಉತ್ತರ ನೀಡಬೇಕು ಎಂದು ಇಲಾಖೆ ಹೇಳಿದೆ.

ಈ ಕುರಿತು ಪ್ರತಿಕ್ರಿಯೆಗೆ ಸುದ್ದಿಸಂಸ್ಥೆ ಕಳುಹಿಸಿದ ಇ–ಮೇಲ್‌ಗೆ ಅನಿಲ್ ಅಂಬಾನಿ ಅವರ ಕಚೇರಿಯು ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.