ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಾಂಶ ಅಭಿವೃದ್ಧಿಗೆ ಭಾರತದಲ್ಲಿ ಇನ್ನಷ್ಟು ಕೇಂದ್ರ: ಐಬಿಎಂ

Last Updated 19 ನವೆಂಬರ್ 2021, 15:12 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕದ ಪ್ರಮುಖ ತಂತ್ರಜ್ಞಾನ ಕಂಪನಿ ಐಬಿಎಂ, ತಂತ್ರಾಂಶ ಅಭಿವೃದ್ಧಿಗಾಗಿ ಭಾರತದಲ್ಲಿ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯುವುದಾಗಿ ಶುಕ್ರವಾರ ಹೇಳಿದೆ.

ಕಂಪನಿಯು ತನ್ನ ಡಿಜಿಟಲೀಕರಣದ ಪಯಣದಲ್ಲಿ ಸರ್ಕಾರದೊಂದಿಗೆ ಪಾಲುದಾರನಾಗಲು ಬಯಸುತ್ತಿದೆ. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಅಧ್ಯಕ್ಷ ಅರವಿಂದ ಕೃಷ್ಣನ್‌ ಹೇಳಿದ್ದಾರೆ.

ಭಾರತ ಪ್ರವಾಸದಲ್ಲಿರುವ ಕೃಷ್ಣನ್‌ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಮತ್ತು ಐ.ಟಿ. ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದಾರೆ.

ಕಂಪನಿಯು ಮೂರನೇ ತ್ರೈಮಾಸಿಕದಲ್ಲಿ ಏಷ್ಯಾದಲ್ಲಿ ಉತ್ತಮ ಪ್ರಗತಿ ಕಂಡಿದ್ದು, ಅದರಲ್ಲಿ ಭಾರತದ ಪಾಲು ದೊಡ್ಡಮಟ್ಟ‌ದ್ದಾಗಿದೆ ಎಂದಿದ್ದಾರೆ.

ಬೆಂಗಳೂರು, ಹೈದರಾಬಾದ್‌ ಮತ್ತು ಪುಣೆಯಲ್ಲಿ ಕಂಪನಿಯು ದೊಡ್ಡದಾದ ತಂತ್ರಾಂಶ ಅಭಿವೃದ್ಧಿ ಕೇಂದ್ರಗಳನ್ನು ಹೊಂದಿದೆ. ದೆಹಲಿಯಲ್ಲಿ ಸಣ್ಣ ಗಾತ್ರದ ಕೇಂದ್ರವನ್ನು ಹೊಂದಿದೆ. ಅಹಮದಾಬಾದ್‌ ಮತ್ತು ಕೊಚ್ಚಿ ಸಮೀಪದಲ್ಲಿ ತಲಾ ಒಂದು ಕೇಂದ್ರ ತೆರೆಯುವುದಾಗಿ ಈಗಾಗಲೇ ಘೋಷಿಸಲಾಗಿದೆ. ಇನ್ನುಳಿದ ಕೇಂದ್ರಗಳ ಬಗ್ಗೆ ಈಗಲೇ ತಿಳಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT