3,900 ನೌಕರರನ್ನು ವಜಾಗೊಳಿಸಲಿದೆ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ‘ಐಬಿಎಂ’

ವಾಷಿಂಗ್ಟನ್: ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಆಸ್ತಿ ವಿನಿಯೋಗದ ಭಾಗವಾಗಿ 3,900 ನೌಕರರನ್ನು ಕೆಲಸದಿಂದ ವಜಾಗೊಳಿಸುವುದಾಗಿ ಗುರುವಾರ ಹೇಳಿದೆ.
ಆರ್ಥಿಕ ಪರಿಸ್ಥಿತಿಯು ಸವಾಲಿನಿಂದ ಕೂಡಿರುವ ಕಾರಣ, ಕಂಪನಿಗೆ ಹೊಸ ರೂಪ ಕೊಡುವ ಪ್ರಕ್ರಿಯೆಯ ಭಾಗವಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಕಂಪನಿ ತಿಳಿಸಿದೆ.
ನಿರ್ದಿಷ್ಟ ಪ್ರದೇಶಗಳಲ್ಲಿ ಹೊಸ ನೌಕರರನ್ನು ನೇಮಕ ಮಾಡಿಕೊಳ್ಳುವುದನ್ನು ಮುಂದುವರಿಸಲಾಗುವುದು ಎಂದು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಜೇಮ್ಸ್ ಕವನಾಗ್ ಹೇಳಿದ್ದಾರೆ.
ಕಳೆದ ಎರಡೂವರೆ ವರ್ಷದಿಂದ ಸಾವಿರಾರು ನೌಕರರನ್ನು ನೇಮಿಸಿಕೊಳ್ಳುವ ಮೂಲಕ ಇತರರಿಗಿಂತ ಭಿನ್ನವಾಗಿದ್ದೇವೆ. ನಾವು ದಕ್ಷತೆ ಹೆಚ್ಚಿಸುವ ಡಿಜಿಟಲೀಕರಣ, ಆಟೊಮೇಷನ್ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಜತೆಗೆ, ಕ್ಲೈಂಟ್-ಫೇಸಿಂಗ್ ಸಂಶೋಧನೆಗಾಗಿ ನೌಕರರನ್ನು ನೇಮಕ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಕವನಾಗ್ ತಿಳಿಸಿದ್ದಾರೆ.
IBM Corp to lay off 3,900 people as part of some asset divestments: Reuters pic.twitter.com/tY3nKAnWcQ
— ANI (@ANI) January 25, 2023
ಇತ್ತೀಚೆಗೆ ಇ–ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ, ಭಾರತದಲ್ಲಿ 1 ಸಾವಿರ ಸೇರಿದಂತೆ ಜಾಗತಿಕವಾಗಿ 18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಹೇಳಿತ್ತು.
ಎಚ್ಪಿ, ಮೆಟಾ, ಮತ್ತು ಟ್ವಿಟರ್ನಂತಹ ಕಂಪನಿಗಳು ಕೂಡ ವೆಚ್ಚ ತಗ್ಗಿಸುವ ಹಿನ್ನೆಲೆಯಲ್ಲಿ ಉದ್ಯೋಗ ಕಡಿತದ ಮೊರೆ ಹೋಗಿವೆ.
ಮೆಟಾ ಮಾಲೀಕತ್ವದ ಫೇಸ್ಬುಕ್ ಕಂಪನಿಯು 11 ಸಾವಿರ ನೌಕರರನ್ನು ಕೆಲಸದಿಂದ ತೆಗೆಯುವುದಾಗಿ ಹೇಳಿತ್ತು. ಟ್ವಿಟರ್ ಕಂಪನಿಯು ಉದ್ಯಮಿ ಇಲಾನ್ ಮಸ್ಕ್ ಅವರ ತೆಕ್ಕೆಗೆ ಸೇರಿದ ನಂತರದಲ್ಲಿ ಶೇಕಡ 50ರಷ್ಟು ನೌಕರರನ್ನು ಕೆಲಸದಿಂದ ತೆಗೆದುಹಾಕಿದೆ.
ಗೂಗಲ್ ಕಂಪನಿಯು ಒಟ್ಟು 12 ಸಾವಿರ ನೌಕರರನ್ನು ಕೆಲಸದಿಂದ ತೆಗೆಯುವುದಾಗಿ ಹೇಳಿದೆ. ಜಾಗತಿಕವಾಗಿ ಆರ್ಥಿಕ ಹಿಂಜರಿತ ಎದುರಾಗಬಹುದು ಎಂಬ ಭೀತಿಯ ನಡುವೆ ನೌಕರರನ್ನು ಕೆಲಸದಿಂದ ತೆಗೆಯುತ್ತಿರುವ ತಂತ್ರಜ್ಞಾನ ಕಂಪನಿಗಳ ಸಾಲಿಗೆ ಈಗ ಗೂಗಲ್ ಕೂಡ ಸೇರಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.