ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವರ್ಷಕ್ಕೆ 3 ಬಾರಿ ಸಿಎ ಫೌಂಡೇಷನ್‌, ಇಂಟರ್‌ಮೀಡಿಯೆಟ್‌ ಪರೀಕ್ಷೆ

Published 8 ಮಾರ್ಚ್ 2024, 15:28 IST
Last Updated 8 ಮಾರ್ಚ್ 2024, 15:28 IST
ಅಕ್ಷರ ಗಾತ್ರ

ನವದೆಹಲಿ: ವರ್ಷದಲ್ಲಿ ಮೂರು ಬಾರಿ ಸಿಎ ಫೌಂಡೇಷನ್‌ ಕೋರ್ಸ್‌ ಹಾಗೂ ಸಿಎ ಮಧ್ಯಂತರ (ಇಂಟರ್‌ಮೀಡಿಯೆಟ್‌) ಕೋರ್ಸ್‌ ಪರೀಕ್ಷೆಗಳನ್ನು ನಡೆಸಲು ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯು (ಐಸಿಎಐ) ನಿರ್ಧರಿಸಿದೆ.

ಪ್ರಸ್ತುತ ವರ್ಷಕ್ಕೆ ಎರಡು ಬಾರಿ ಈ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಚಾರ್ಟೆಡ್‌ ಅಕೌಂಟೆಂಟ್‌ (ಸಿಎ) ಅಧ್ಯಯನಕ್ಕೆ ಇಚ್ಛಿಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಇತ್ತೀಚೆಗೆ ನಡೆದ ಸಂಸ್ಥೆಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.   

‘ಪ್ರತಿ ವರ್ಷದ ಜನವರಿಯಲ್ಲಿ ಪರೀಕ್ಷೆ ನಡೆಸಲಾಗುವುದು. ಬಳಿಕ ಮೇ ಅಥವಾ ಜೂನ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸಂಸ್ಥೆಯು ಶುಕ್ರವಾರ ತಿಳಿಸಿದೆ.

ಪ್ರಸ್ತುತ ಸಂಸ್ಥೆಯು 4 ಲಕ್ಷಕ್ಕೂ ಹೆಚ್ಚು ಸದಸ್ಯರು ಹಾಗೂ 8.5 ಲಕ್ಷ ವಿದ್ಯಾರ್ಥಿಗಳನ್ನು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT