ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಐಸಿಐಸಿಐ ಬ್ಯಾಂಕ್‌ ಲಾಭ ಶೇ 25ರಷ್ಟು ಹೆಚ್ಚಳ

Last Updated 23 ಅಕ್ಟೋಬರ್ 2021, 13:27 IST
ಅಕ್ಷರ ಗಾತ್ರ

ನವದೆಹಲಿ: ಐಸಿಐಸಿಐ ಬ್ಯಾಂಕ್‌ ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 6,092 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹ 4,882 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇಕಡ 24.7ರಷ್ಟು ಹೆಚ್ಚಾಗಿದೆ.

ಒಟ್ಟು ವರಮಾನವು ₹ 39,289.60 ಕೋಟಿಯಿಂದ ₹ 39,484.50 ಕೋಟಿಗೆ ಏರಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣವು ಶೇ 5.17ರಿಂದ ಶೇ 4.82ಕ್ಕೆ ಇಳಿಕೆ ಕಂಡಿದೆ. ನಿವ್ವಳ ಎನ್‌ಪಿಎ ಶೇ 1 ರಷ್ಟು ಇದ್ದಿದ್ದು ಶೇ 0.99ಕ್ಕೆ ಅಲ್ಪ ಇಳಿಕೆ ಆಗಿದೆ ಎಂದು ಬ್ಯಾಂಕ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT