ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಐಸಿಐ ಬ್ಯಾಂಕ್‌ ಲಾಭ ಶೇ 19ರಷ್ಟು ಹೆಚ್ಚಳ

Last Updated 22 ಜನವರಿ 2022, 17:04 IST
ಅಕ್ಷರ ಗಾತ್ರ

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 6,536 ಕೋಟಿಗಳಷ್ಟಾಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 5,498 ಕೋಟಿ ನಿವ್ವಳ ಲಾಭ ಆಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಶೇ 18.8ರಷ್ಟು ಏರಿಕೆ ಕಂಡುಬಂದಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಆದರೆ, ಬ್ಯಾಂಕ್‌ನ ಒಟ್ಟಾರೆ ವರಮಾನವು ₹ 40,419 ಕೋಟಿಗಳಿಂದ ₹ 39,865 ಕೋಟಿಗಳಿಗೆ ಇಳಿಕೆ ಆಗಿದೆ. ನಿವ್ವಳ ಬಡ್ಡಿ ವರಮಾನ ₹ 9,912 ಕೋಟಿಗಳಿಂದ ₹ 12,236 ಕೋಟಿಗಳಿಗೆ ಶೇ 23ರಷ್ಟು ಹೆಚ್ಚಾಗಿದೆ.

ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಶೇ 4.38 ರಿಂದ ಶೇ 41.3ಕ್ಕೆ ಇಳಿಕೆ ಆಗಿದೆ. ಆದರೆ, ನಿವ್ವಳ ಎನ್‌ಪಿಎ ಶೇ 0.63 ರಿಂದ ಶೇ 0.85ಕ್ಕೆ ಏರಿಕೆ ಆಗಿದೆ.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತದ ಪ್ರಮಾಣವು ಶೇ 79.9ರಷ್ಟಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT