ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ಉತ್ಪಾದನೆಯಲ್ಲಿ ಶೇ 3.2ರಷ್ಟು ಬೆಳವಣಿಗೆ

Last Updated 10 ಡಿಸೆಂಬರ್ 2021, 16:12 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆ ಪ್ರಮಾಣವು ಅಕ್ಟೋಬರ್‌ನಲ್ಲಿ ಶೇಕಡ 3.2ರಷ್ಟು ದಾಖಲಾಗಿದೆ. ಗಣಿ, ಇಂಧನ ಮತ್ತು ತಯಾರಿಕಾ ವಲಯಗಳಲ್ಲಿ ಉತ್ತಮ ಬೆಳವಣಿಗೆ ಕಂಡುಬಂದಿದೆ.

ಕೈಗಾರಿಕಾ ಉತ್ಪಾದನೆ ಸೂಚ್ಯಂಕದಲ್ಲಿ (ಐಐಪಿ) ಶೇಕಡ 77.63ರಷ್ಟು ಪಾಲು ಹೊಂದಿರುವ ತಯಾರಿಕಾ ವಲಯವು ಅಕ್ಟೋಬರ್‌ನಲ್ಲಿ ಶೇ 2ರಷ್ಟು ಬೆಳವಣಿಗೆ ಕಂಡಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಶುಕ್ರವಾರ ಬಿಡುಗಡೆ ಮಾಡಿರುವ ಅಂಕಿ–ಅಂಶಗಳು ಹೇಳಿವೆ.

ಅಕ್ಟೋಬರ್‌ನಲ್ಲಿ ಗಣಿಗಾರಿಕೆ ವಲಯದ ಉತ್ಪಾದನೆಯು ಶೇ 11.4ರಷ್ಟು ಹೆಚ್ಚಳ ಕಂಡಿದೆ. ಇಂಧನ ಉತ್ಪಾದನೆಯು ಶೇ 3.1ರಷ್ಟು ಬೆಳವಣಿಗೆ ದಾಖಲಿಸಿದೆ.

ಕೈಗಾರಿಕಾ ಉತ್ಪಾದನೆಯ ಬೆಳವಣಿಗೆ ಪ್ರಮಾಣವು ಮೇ ತಿಂಗಳಿನಿಂದ ಆಗಸ್ಟ್‌ವರೆಗೆ ಎರಡಂಕಿಯ ಮಟ್ಟದಲ್ಲಿ ಇತ್ತು. ಅದು ಸೆಪ್ಟೆಂಬರ್‌ನಲ್ಲಿ ಶೇ 3.3ಕ್ಕೆ ಇಳಿಕೆ ಆಯಿತು. ಅಕ್ಟೋಬರ್‌ನಲ್ಲಿ ಶೇ 3.2ಕ್ಕೆ ತಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT