ಸೋಮವಾರ, ಮಾರ್ಚ್ 20, 2023
24 °C

ಭಾರತಕ್ಕೆ ಜಿ–20 ಅಧ್ಯಕ್ಷತೆ ಮಹತ್ವದ್ದು: ಐಎಂಎಫ್ ನಿರ್ದೇಶಕಿ ಕ್ರಿಸ್ಟಲೀನಾ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಜಗತ್ತು ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಹಾಗೂ ಹಲವೆಡೆ ಸಾಮಾಜಿಕ ಸಮಸ್ಯೆಗಳು ಇರುವ ಸಂದರ್ಭದಲ್ಲಿ ಭಾರತಕ್ಕೆ ಜಿ–20 ಅಧ್ಯಕ್ಷತೆ ಸಿಕ್ಕಿದ್ದು, ಅಂತರರಾಷ್ಟ್ರೀಯ ಸಮುದಾಯದ ಪಾಲಿಗೆ ಇದು ಮಹತ್ವದ್ದು ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲೀನಾ ಜಾರ್ಜಿವಾ ಹೇಳಿದ್ದಾರೆ.

‘ಜಿ–20 ನಾಯಕತ್ವವನ್ನು ಭಾರತ ವಹಿಸಿಕೊಂಡಿರುವ ನಮಗೆ ಮಹತ್ವದ್ದು. ಜಾಗತಿಕ ಅರ್ಥ ವ್ಯವಸ್ಥೆಯನ್ನು ರಕ್ಷಿಸುವ ಮೂಲಕ ಜಗತ್ತು ತನ್ನ ಒಳಿತನ್ನು ರಕ್ಷಿಸಿಕೊಳ್ಳಬೇಕಿದೆ. ನಮ್ಮನ್ನು ಒಂದಾಗಿ ಇರಿಸುವ ಆ ಮಹಾನ್ ಜಾಗತಿಕ ಸೇವೆಯನ್ನು ಭಾರತವು ಮಾಡಲಿದೆ ಎಂಬುದು ನನ್ನ ಬಯಕೆ’ ಎಂದು ಅವರು ಹೇಳಿದ್ದಾರೆ.

ಭಾರತವು ಕೆಲವು ಕಷ್ಟದ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದೆ. ಅವು ಈಗ ಪ್ರಯೋಜನ ತಂದುಕೊಡುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು