ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ 8 ವರ್ಷದಲ್ಲಿ ಹಣಕಾಸು ಇಲಾಖೆ ಅಂದಾಜುಗಳೆಲ್ಲ ವಿಫಲ: ಸುಬ್ರಮಣಿಯನ್‌ ಸ್ವಾಮಿ‌

Last Updated 27 ಆಗಸ್ಟ್ 2022, 14:31 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ಎರಡು ವರ್ಷಗಳಲ್ಲಿ ಭಾರತವು ಶೇಕಡ 7.4ರಷ್ಟು ಆರ್ಥಿಕ ಪ್ರಗತಿ ಸಾಧಿಸಲಿದೆ ಎಂಬ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಆರ್ಥಿಕ ಭವಿಷ್ಯ ನುಡಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ವ್ಯಂಗ್ಯ ಮಾಡಿದ್ದಾರೆ.

ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಅವರು, ‘ಮುನ್ನೋಟ ಎಂದರೆ ಏನೂ ಅಲ್ಲ. ಕಳೆದ 8 ವರ್ಷಗಳಲ್ಲಿ ಹಣಕಾಸು ಸಚಿವಾಲಯದ ಎಲ್ಲಾ ಅಂದಾಜು ಲೆಕ್ಕಾಚಾರಗಳು ಹೇಳಿದ ಗುರಿ ತಲುಪುವಲ್ಲಿ ವಿಫಲವಾಗಿವೆ. ವಾಸ್ತವವಾಗಿ ಜಿಡಿಪಿ ಬೆಳವಣಿಗೆ ದರವು 2016 ರಿಂದ ಕರೋನಾ ಸಾಂಕ್ರಾಮಿಕ ಕಾಲದ ವರೆಗೆ ವರ್ಷದಿಂದ ವರ್ಷಕ್ಕೆ ಕುಸಿದಿದೆ’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಈ ಹಿಂದೆಯೂ ಆರ್ಥಿಕತೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ‘ರಾಷ್ಟ್ರದ ಆರ್ಥಿಕತೆ ಮತ್ತು ವಿದೇಶಾಂಗ ನೀತಿಯಲ್ಲಿ ಮೋದಿ ಸರ್ಕಾರ 'ವಿಕಾಸ' ತರುವಲ್ಲಿ ವಿಫಲವಾಗಿದೆ ಎಂಬುದು ಸಾಬೀತಾಗಿದೆ’ ಎಂದು ಈ ಹಿಂದೆ ಅವರು ಹೇಳಿದ್ದರು.

2022-23ರಲ್ಲಿ ಭಾರತವು ಶೇ 7.4 ರಷ್ಟು ಬೆಳವಣಿಗೆ ಸಾಧಿಸಲಿದೆ. ಮುಂದಿನ ವರ್ಷವೂ ಅದೇ ವೇಗದಲ್ಲಿ ಮುನ್ನಡೆಯಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಹೇಳಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT