ನವದೆಹಲಿ: ತೆರಿಗೆ ಪ್ರಕ್ರಿಯೆಯಲ್ಲಿನ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ಲಾರ್ಸೆನ್ ಆ್ಯಂಡ್ ಟೊಬ್ರೊ ಕಂಪನಿಗೆ ಆದಾಯ ತೆರಿಗೆ ಇಲಾಖೆಯು ₹4.68 ಕೋಟಿ ದಂಡ ವಿಧಿಸಿದೆ.

ಅಂಗಸಂಸ್ಥೆಯಾದ ಎಲ್ ಆ್ಯಂಡ್ ಟಿ ಹೈಡ್ರೋಕಾರ್ಬನ್ ಎಂಜಿನಿಯರಿಂಗ್ ಲಿಮಿಟೆಡ್ 2021ರ ಏಪ್ರಿಲ್ 1ರಂದು ಎಲ್ ಆ್ಯಂಡ್ ಟಿ ಸಮೂಹದಲ್ಲಿ ವಿಲೀನವಾಗಿತ್ತು. 2020–21ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿ ಈ ಕಂಪನಿಯು ಸಲ್ಲಿಸಿದ ವರಮಾನವು ಇಲಾಖೆಯ ಮೌಲ್ಯಮಾಪನಕ್ಕೆ ತಾಳೆಯಾಗಿಲ್ಲ. ಈ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಲಾಗಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ಇಲಾಖೆಯ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕಂಪನಿ ತಿಳಿಸಿದೆ.

ಎಂಜಿನಿಯರಿಂಗ್ ಹಾಗೂ ನಿರ್ಮಾಣ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವ ಈ ಕಂಪನಿಯು, ₹2.25 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.