ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ಲಕ್ಷಕ್ಕೂ ಅಧಿಕ ತೆರಿಗೆದಾರರಿಗೆ ಮರುಪಾವತಿ: ಆದಾಯ ತೆರಿಗೆ ಇಲಾಖೆ ಮಾಹಿತಿ

Last Updated 11 ಮಾರ್ಚ್ 2021, 2:36 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವರ್ಷ ಏಪ್ರಿಲ್ 1 ರಿಂದ 2021 ರ ಮಾರ್ಚ್ 8 ರವರೆಗೆ 2.02 ಕೋಟಿಗಿಂತ ಹೆಚ್ಚು ತೆರಿಗೆದಾರರಿಗೆ ₹ 2,00,411 ಕೋಟಿಗಿಂತಲೂ ಹೆಚ್ಚಿನ ಮೊತ್ತವನ್ನು ಮರುಪಾವತಿ ಮಾಡಿರುವುದಾಗಿ ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಈ ಕುರಿತು ಬುಧವಾರ ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿರುವ ಆದಾಯ ತೆರಿಗೆ ಇಲಾಖೆ, 'ಒಟ್ಟು ₹ 2,00,411 ಕೋಟಿ ಮೊತ್ತದ ಮರುಪಾವತಿಯಲ್ಲಿ 1.99 ಕೋಟಿ ತೆರಿಗೆದಾರರಿಗೆ ₹71,865 ಕೋಟಿ ಹಿಂದಿರುಗಿಸಲಾಗಿದೆ. ₹1.28 ಲಕ್ಷ ಕೋಟಿಯನ್ನು ಕಾರ್ಪೊರೇಟ್ ತೆರಿಗೆದಾರರಿಗೆ ಮರುಪಾವತಿ ಮಾಡಲಾಗಿದೆ,' ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT