ಗುರುವಾರ , ನವೆಂಬರ್ 26, 2020
22 °C

ಐಟಿಆರ್‌ ಸಲ್ಲಿಕೆ ಗಡುವು ಡಿಸೆಂಬರ್‌ 31ರವರೆಗೆ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 2019–20ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ಲೆಕ್ಕಪತ್ರ ವಿವರ ಸಲ್ಲಿಕೆಯ (ಐಟಿಆರ್‌) ಗಡುವನ್ನು ಡಿಸೆಂಬರ್‌ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ತಿಳಿಸಿದೆ.

ಕೇಂದ್ರ ಸರ್ಕಾರ ಮೇ ತಿಂಗಳಿನಲ್ಲಿ ಐಟಿಆರ್‌ ಗಡುವನ್ನು ಜುಲೈ 31ರಿಂದ ನವೆಂಬರ್‌  30ರವರೆಗೆ ವಿಸ್ತರಣೆ ಮಾಡಿತ್ತು.

ಆದಾಯ ತೆರಿಗೆ ಲೆಕ್ಕಪತ್ರ ತಪಾಸಣೆ ಆಗಬೇಕಿರುವವರಿಗೆ ಐಟಿಆರ್‌ ಸಲ್ಲಿಸಲು 2021 ಜನವರಿ 31ರವರೆಗೆ ಅವಕಾಶ ನೀಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು (ಸಿಬಿಡಿಟಿ) ಪ್ರಕಟಣೆಯಲ್ಲಿ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು