ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೇನಲ್ಲಿ ಭಾರತಕ್ಕೆ ₹43,838 ಕೋಟಿ ವಿದೇಶಿ ಬಂಡವಾಳ ಒಳಹರಿವು

Published 3 ಜೂನ್ 2023, 16:17 IST
Last Updated 3 ಜೂನ್ 2023, 16:17 IST
ಅಕ್ಷರ ಗಾತ್ರ

ಬೆಂಗಳೂರು: ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆಗಳಲ್ಲಿ ಭಾರತವು ಮೇ ತಿಂಗಳಿನಲ್ಲಿ ಅತಿ ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವಿಸಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್‌ ಹೇಳಿದರು.

ನ್ಯಾಷನಲ್‌ ಸೆಕ್ಯುರಿಟೀಸ್‌ ಡೆಪಾಸಿಟರಿ ಲಿಮಿಡೆಡ್‌ನಲ್ಲಿ (ಎನ್‌ಎಸ್‌ಡಿಎಲ್‌) ಇರುವ ಮಾಹಿತಿಯ ಪ್ರಕಾರ, ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಮೇ ತಿಂಗಳಿನಲ್ಲಿ ಭಾರತದಲ್ಲಿ ಒಟ್ಟು ₹ 43,838 ಕೋಟಿ ಹೂಡಿಕೆ ಮಾಡಿದ್ದಾರೆ. ಈ ಮೂಲಕ ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆಗಳಲ್ಲಿ ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಿದಂತಾಗಿದೆ ಎಂದು ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ವಿದೇಶಿ ಹೂಡಿಕೆದಾರರು ಮೇನಲ್ಲಿ ಚೀನಾದಿಂದ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ ಎಂದು ಅವರು ತಿಳಿಸಿದರು.

ಈಚೆಗೆ ಬಿಡುಗಡೆ ಆಗಿರುವ ಭಾರತದ ಜಿಡಿಪಿ ಬೆಳವಣಿಗೆಯು ಆಶಾದಾಯಕ ಆಗಿರುವುದರ ಜೊತೆಗೆ ತಯಾರಿಕಾ ವಲಯದ ಬೆಳವಣಿಗೆಯೂ ಉತ್ತಮವಾಗಿದೆ. ಈ ಅಂಶಗಳು ಆರ್ಥಿಕತೆಯು ಉತ್ತಮ ಬೆಳವಣಿಗೆ ಕಾಣುತ್ತಿದೆ ಎನ್ನುವುದನ್ನು ಸೂಚಿಸುತ್ತಿವೆ. ಹೀಗಾಗಿ, ಜೂನ್‌ನಲ್ಲಿಯೂ ಭಾರತದ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಜಯಕುಮಾರ್‌ ಅಭಿಪ್ರಾಯಪಟ್ಟರು.

ಹಣಕಾಸು, ಆಟೊಮೊಬೈಲ್‌, ದೂರಸಂಪರ್ಕ ಮತ್ತು ನಿರ್ಮಾಣ ವಲಯಗಳು ಹೆಚ್ಚಿನ ಪ್ರಮಾಣದಲ್ಲಿ ವಿದೇಶಿ ಹೂಡಿಕೆಯನ್ನು ಆಕರ್ಷಿಸುತ್ತಿವೆ. ನಿಫ್ಟಿ ಸಾರ್ವಕಾಲಿಕ ದಾಖಲೆ ಮಟ್ಟವಾದ 18,887ರತ್ತ ಸಾಗುತ್ತಿದ್ದು, ಕೆಲವೇ ವಹಿವಾಟು ದಿನಗಳಲ್ಲಿ ಅದನ್ನೂ ದಾಟುವ ಎಲ್ಲಾ ಸಾಧ್ಯತೆಗಳಿವೆ. ಆದರೆ, ದಾಖಲೆ ಮಟ್ಟದಲ್ಲಿ ಮಾರುಕಟ್ಟೆ ಮೌಲ್ಯ ಗರಿಷ್ಠ ಮಟ್ಟದಲ್ಲಿ ಇರುವುದರಿಂದ ಮಾರಾಟದ ಒತ್ತಡ ಎದುರಾಗಬಹುದು ಎನ್ನುವ ಸೂಚನೆಯನ್ನೂ ಅವರು ನೀಡಿದರು.

ಭಾರತದಲ್ಲಿ ಎಫ್‌ಪಿಐ ಒಳಹರಿವಿಗೆ ಪೂರಕ ವಾತಾವರಣ ಸಾರ್ವಕಾಲಿಕ ದಾಖಲೆ ಮಟ್ಟ ಮೀರಲಿರುವ ನಿಫ್ಟಿ ಚೀನಾದಿಂದ ಬಂಡವಾಳ ಹಿಂತೆಗೆತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT