ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ವಿತ್ತೀಯ ಬಲವರ್ಧನೆಗೆ ಗಮನ: ಡಿಬಿಎಸ್‌ ಬ್ಯಾಂಕ್‌

Last Updated 9 ಜನವರಿ 2023, 14:07 IST
ಅಕ್ಷರ ಗಾತ್ರ

ಮುಂಬೈ: ದೀರ್ಘಾವಧಿ ಆರ್ಥಿಕ ಬೆಳವಣಿಗೆಗೆ ಅಡ್ಡಿಯಾಗದ ರೀತಿಯಲ್ಲಿ ವಿತ್ತೀಯ ಕೊರತೆಯನ್ನು ತಗ್ಗಿಸಲು ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಗಮನ ಹರಿಸಲಿದೆ ಎಂದು ಡಿಬಿಎಸ್‌ ಬ್ಯಾಂಕ್‌ನ ಮುಖ್ಯ ಆರ್ಥಿಕ ತಜ್ಞ ತೈಮುರ್‌ ಬೈಗ್‌ ಅಂದಾಜಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರುವಿರ 1ರಂದು ಬಜೆಟ್‌ ಮಂಡಿಸಲಿದ್ದಾರೆ. 2024ರ ಮೇನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ.

ಕೇಂದ್ರ ಬಜೆಟ್‌ನಲ್ಲಿ ವಿತ್ತೀಯ ಬಲವರ್ಧನೆಗೆ ದಾರಿ ಮಾಡಿಕೊಡುವ ನಿರೀಕ್ಷೆ ಇದೆ ಎಂದೂ ಅವರು ತಿಳಿಸಿದ್ದಾರೆ.

ಸರ್ಕಾರವು 2023–24ರಲ್ಲಿ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 5.8ರಿಂದ ಶೇ 5.9ರಲ್ಲಿ ನಿಯಂತ್ರಿಸುವ ನಿರೀಕ್ಷೆ ಇದೆ ಎಂದು ಡಿಬಿಎಸ್‌ ಬ್ಯಾಂಕ್‌ ಹೇಳಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯು ಶೇ 6.4ರಷ್ಟು ಆಗುವ ಅಂದಾಜು ಮಾಡಲಾಗಿದೆ.

2025–26ನೇ ಹಣಕಾಸು ವರ್ಷದ ಒಳಗಾಗಿ ವಿತ್ತೀಯ ಕೊರತೆಯನ್ನು ಶೇ 4.5ಕ್ಕೆ ಇಳಿಕೆ ಮಾಡುವ ಗುರಿ ಹೊಂದಿರುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ.

ಆರ್ಥಿಕ ಬೆಳವಣಿಗೆ ಇಳಿಮುಖ ಆಗುವುದರಿಂದ ಹೆಚ್ಚು ವೆಚ್ಚ ಮಾಡಲು ಆಗುವುದಿಲ್ಲ. ಹೀಗಾಗಿ ಸರ್ಕಾರವು ಮುಂಬರುವ ಬಜೆಟ್‌ನಲ್ಲಿ ವಿತ್ತೀಯ ಬಲವರ್ಧನೆಗೆ ಆದ್ಯತೆ ನೀಡಲಿದೆ ಎಂದು ರಾಯಿಟರ್ಸ್‌ ಸುದ್ದಿ ಸಂಸ್ಥೆಯು ನಡೆಸಿರುವ ಸಮೀಕ್ಷೆಯಲ್ಲಿ ಆರ್ಥಿಕ ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT