ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿವರ್ಸ್ ರೆಪೊ ದರ ಹೆಚ್ಚಳ ಸಾಧ್ಯತೆ

Last Updated 7 ಫೆಬ್ರುವರಿ 2022, 15:35 IST
ಅಕ್ಷರ ಗಾತ್ರ

ಮುಂಬೈ (ರಾಯಿಟರ್ಸ್): ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ರೆಪೊ ದರದಲ್ಲಿ ಬದಲಾವಣೆ ತರುವ ಸಾಧ್ಯತೆ ಕಡಿಮೆ ಇದೆ. ಆದರೆ, ರಿವರ್ಸ್ ರೆಪೊ ದರವನ್ನು ಆರ್‌ಬಿಐ ತುಸು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದ ಮಾರುಕಟ್ಟೆಯಲ್ಲಿ ನಗದು ಲಭ್ಯತೆ ಹೆಚ್ಚಿರುವುದನ್ನು ಕಡಿಮೆ ಮಾಡುವ ಉದ್ದೇಶದಿಂದ ಆರ್‌ಬಿಐ ರಿವರ್ಸ್‌ ರೆಪೊ ದರವನ್ನು ಜಾಸ್ತಿ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಆರ್‌ಬಿಐನ ಹಣಕಾಸು ನೀತಿ ಸಮಿತಿಯ ಸಭೆಯು ಗುರುವಾರ ಕೊನೆಗೊಳ್ಳಲಿದೆ. ರಿವರ್ಸ್‌ ರೆಪೊ ದರವು ಈಗ ಶೇಕಡ 3.35ರಷ್ಟು ಇದೆ. ಈ ದರವನ್ನು ಆರ್‌ಬಿಐ ಶೇ 3.55ಕ್ಕೆ ಏರಿಕೆ ಮಾಡಬಹುದು ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ರಿವರ್ಸ್ ರೆಪೊ ಅಂದರೆ ಆರ್‌ಬಿಐ, ಬ್ಯಾಂಕ್‌ಗಳಿಗೆ ನೀಡುವ ಬಡ್ಡಿ ದರ.

ರೆಪೊ ದರ ಈಗ ಬದಲಾವಣೆ ಕಾಣಲಿಕ್ಕಿಲ್ಲವಾದರೂ, ಏಪ್ರಿಲ್‌ನಲ್ಲಿ ಇದು ಶೇ 0.25ರಷ್ಟು ಹೆಚ್ಚಳವಾಗಬಹುದು ಎಂದು ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಹಲವು ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ. ಆರ್‌ಬಿಐ ರೆಪೊ ದರಗಳನ್ನು 2020ರ ಮೇ ತಿಂಗಳಿನಿಂದಲೂ ಕಡಿಮೆ ಮಟ್ಟದಲ್ಲಿ ಉಳಿಸಿಕೊಂಡಿದೆ. ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಹೊಂದಾಣಿಕೆಯ ನಿಲುವನ್ನು ಮುಂದುವರಿಸಲಾಗುತ್ತದೆ ಎಂದು ಮತ್ತೆ ಮತ್ತೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT