ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಕ್‌ ಚಾಲಕರಿಗೆ ಸಾವಿರ ವಿಶ್ರಾಂತಿ ಗೃಹ ನಿರ್ಮಾಣ

Published 2 ಫೆಬ್ರುವರಿ 2024, 15:22 IST
Last Updated 2 ಫೆಬ್ರುವರಿ 2024, 15:22 IST
ಅಕ್ಷರ ಗಾತ್ರ

ನವದೆಹಲಿ: ‘ಕೇಂದ್ರದಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಇದೇ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. 

ಶುಕ್ರವಾರ ನಡೆದ ಭಾರತ್‌ ಮೊಬಿಲಿಟಿ ಗ್ಲೋಬಲ್‌ ಎಕ್ಸ್‌ಪೋದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗೆ ಅನುಕೂಲ ಕಲ್ಪಿಸಲು ಪ್ರಥಮ ಹಂತದಲ್ಲಿ ಒಂದು ಸಾವಿರ ಸುಸಜ್ಜಿತ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

2014ಕ್ಕೂ ಮೊದಲು ದೇಶದಲ್ಲಿ 12 ಕೋಟಿ ಪ್ರಯಾಣಿಕ ವಾಹನಗಳು ಮಾರಾಟವಾಗಿದ್ದು, ಈ ಪೈಕಿ 2 ಸಾವಿರ ಎಲೆಕ್ಟ್ರಿಕ್‌ ವಾಹನಗಳಿವೆ. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿಯವರೆಗೆ 21 ಕೋಟಿ ಪ್ರಯಾಣಿಕ ವಾಹನಗಳು ಮಾರಾಟವಾಗಿದ್ದು, ಇದರಲ್ಲಿ 12 ಲಕ್ಷ ಎಲೆಕ್ಟ್ರಿಕ್‌ ವಾಹನಗಳಿವೆ. ಒಂದು ದಶಕದ ಅವಧಿಯಲ್ಲಿ ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ 60ರಷ್ಟು ಬೆಳವಣಿಗೆಯಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT