ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಚೀನಾ ವ್ಯಾಪಾರ ವಹಿವಾಟು ಹೆಚ್ಚಳ

Last Updated 14 ಏಪ್ರಿಲ್ 2022, 19:30 IST
ಅಕ್ಷರ ಗಾತ್ರ

ಬೀಜಿಂಗ್: ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ವ್ಯಾಪಾರ ವಹಿವಾಟು ಶೇಕಡ 15.3ರಷ್ಟು ಹೆಚ್ಚಳ ಆಗಿದ್ದು, ₹ 2.36 ಲಕ್ಷ ಕೋಟಿಗೆ ತಲುಪಿದೆ ಎಂದು ಚೀನಾ ಸರ್ಕಾರ ಮಾಹಿತಿ ನೀಡಿದೆ.

ಈ ಅವಧಿಯಲ್ಲಿ ಚೀನಾದಿಂದ ಭಾರತಕ್ಕೆ ಆಮದು ಆಗುವ ಉತ್ಪನ್ನಗಳ ಮೌಲ್ಯವು ₹ 2.06 ಲಕ್ಷ ಕೋಟಿಗೆ ತಲುಪಿದೆ. ಹಿಂದಿನ ವರ್ಷದಲ್ಲಿ ಭಾರತ–ಚೀನಾ ದ್ವಿಪಕ್ಷೀಯ ವ್ಯಾಪಾರ ವಹಿವಾಟು ದಾಖಲೆಯ ₹ 9.53 ಲಕ್ಷ ಕೋಟಿಗೆ ತಲುಪಿತ್ತು.

ವಹಿವಾಟು ಏರಿಕೆಯ ಪ್ರವೃತ್ತಿಯು ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕೂಡ ಮುಂದುವರಿದಿದ್ದು, ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 15.3ರಷ್ಟು ಜಾಸ್ತಿ ಆಗಿದೆ ಎಂದು ಸರ್ಕಾರಿ ಸ್ವಾಮ್ಯದ ಗ್ಲೋಬಲ್ ಟೈಮ್ಸ್ ಪತ್ರಿಕೆಯು ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT