ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಸ್ಲಾ: ಗೋಯಲ್‌–ಮಸ್ಕ್‌ ಭೇಟಿ?

Published 8 ನವೆಂಬರ್ 2023, 16:40 IST
Last Updated 8 ನವೆಂಬರ್ 2023, 16:40 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ಅವರು ಟೆಸ್ಲಾ ಮುಖ್ಯಸ್ಥ ಇಲಾನ್‌ ಮಸ್ಕ್ ಅವರನ್ನು ಅಮೆರಿಕದಲ್ಲಿ ಮುಂದಿನವಾರ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಟೆಸ್ಲಾ ಕಂಪನಿಯು ಭಾರತದಲ್ಲಿ ತಯಾರಿಕಾ ಘಟಕ ಸ್ಥಾಪನೆ ಮಾಡುವ ಸಂಬಂಧ ಮಾತುಕತೆ ನಡೆಸಲು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿವೆ.

ಇಲಾನ್ ಮಸ್ಕ್ ಅವರು ಜೂನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ಬಳಿಕ ಭಾರತದಲ್ಲಿ ಹೆಚ್ಚು ಹೂಡಿಕೆಗೆ ಮಾಡುವ ಆಲೋಚನೆ ಹೊಂದಿರುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಈ ಭೇಟಿಯು ಮಹತ್ವದ್ದಾಗಿರಲಿದೆ ಎಂದು ಮೂಲಗಳು ಹೇಳಿವೆ.

ಮಸ್ಕ್ ಮತ್ತು ಗೋಯಲ್‌ ಭೇಟಿಯ ವೇಳೆ, ಭಾರತದಲ್ಲಿ ಟೆಸ್ಲಾ ಕಾರು ತಯಾರಿಕೆ, ದೇಶದಾದ್ಯಂತ ಚಾರ್ಜಿಂಗ್‌ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ. ಈ ಕುರಿತು ವಾಣಿಜ್ಯ ಸಚಿವಾಲಯ ಮತ್ತು ಟೆಸ್ಲಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಟೆಸ್ಲಾ ಕಂಪನಿಯು ಭಾರತದಲ್ಲಿ ತಯಾರಿಕಾ ಘಟಕ ಆರಂಭಿಸುವ ಕುರಿತು ಹಲವು ತಿಂಗಳುಗಳಿಂದ ಭಾರತದೊಂದಿಗೆ ಮಾತುಕತೆ ನಡೆಸುತ್ತಿದೆ. ಕೇಂದ್ರ ಸರ್ಕಾರವು, ವಿದ್ಯುತ್ ಚಾಲಿತ ವಾಹನಗಳು ಮತ್ತು ಅದರ ಬಿಡಿಭಾಗಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಬೇಕು ಎಂದು ಟೆಸ್ಲಾ ಕಂಪನಿ ಕೇಳುತ್ತಿದೆ. ಭಾರತದಲ್ಲಿ ತಯಾರಿಕೆಯನ್ನು ಆರಂಭಿಸಿದ ನಂತರದಲ್ಲಿ ತೆರಿಗೆ ವಿನಾಯಿತಿಗಳ ಬಗ್ಗೆ ಪರಿಶೀಲಿಸಬಹುದು ಎಂದು ಕೇಂದ್ರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT